ಶಿಕ್ಷಣದಿಂದ ಮಾತ್ರ ವಿದ್ಯಾರ್ಥಿಗಳ ಬದುಕು ಅರ್ಥಪೂರ್ಣ

ಚಳ್ಳಕೆರೆ

     ಪ್ರತಿಯೊಬ್ಬ ವಿದ್ಯಾರ್ಥಿ ಬದುಕನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಶಾಲೆಗಳು ಮತ್ತು ಶಾಲಾ ಶಿಕ್ಷಕರು ಕಾರ್ಯನಿರ್ವಹಿಸುತ್ತಾರೆ. ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣದ ಮಹತ್ವವನ್ನು ಅರಿತಿದ್ದು ಯಾವುದೇ ತೊಂದರೆಯಾಗದಂತೆ ಶಿಕ್ಷಣ ನೀಡುತ್ತಿದೆ. ವಿದ್ಯಾರ್ಥಿಗಳ ಬದುಕನ್ನು ರೂಪಿಸುವುದೇ ಶಿಕ್ಷಣ ಅದ್ದರಿಂದ ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ಉತ್ತಮ ಶಿಕ್ಷಣ ಕಲಿಯಲು ಮೀಸಲಿಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ವೆಂಕಟೇಶಪ್ಪ ತಿಳಿಸಿದರು.

     ಅವರು, ಶನಿವಾರ ಇಲ್ಲಿನ ಆದರ್ಶ ಶಾಲೆಯಲ್ಲಿ ಶಾಲಾ ಆಡಳಿತ ಮಂಡಳಿ ಹಮ್ಮಿಕೊಂಡಿದ್ದ ಪೋಷಣಾ ಅಭಿಯಾನ ಮತ್ತು ಸಲಹಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಂದು ಶಾಲೆಗಳಲ್ಲೂ ಸಹ ವಿದ್ಯಾರ್ಥಿಗಳಿಗೆ ಶಿಕ್ಷಕರು ಗುಣಾತ್ಮಕ ಶಿಕ್ಷಣದ ಜೊತೆಗೆ ಹಲವಾರು ಸಾಮಾನ್ಯ ಸಂಗತಿಗಳ ಬಗ್ಗೆಯೂ ಸಹ ಮಾರ್ಗದರ್ಶನ ನೀಡುತ್ತಿದ್ಧಾರೆ. ಇಂದು ಶಿಕ್ಷಣ ವಿಶೇಷ ತಾಂತ್ರಿಕತೆಯಿಂದ ಕೂಡಿದ್ದು ಇದಕ್ಕೆ ಪೂರಕವಾಗಿ ಶಿಕ್ಷಕರ ಪರಿಶ್ರಮದಿಂದ ಮಕ್ಕಳಿಗೆ ಪಾಠವನ್ನು ಕಲಿಸುತ್ತಿದ್ಧಾರೆ. ವಿದ್ಯಾರ್ಥಿಗಳು ನಿರ್ಲಕ್ಷ್ಯೆ ವಹಿಸಿದಲ್ಲಿ ಮುಂದಿನ ಅವರ ಜೀವನ ಅಪಾಯಕ್ಕೆ ಸಿಲುಕುವುದರಲ್ಲಿ ಸಂದೆಹವಿಲ್ಲವೆಂದರು.

     ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಆರೋಗ್ಯ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ.ತಿಪ್ಪೇಸ್ವಾಮಿ, ವಿದ್ಯಾರ್ಥಿಗಳಲ್ಲಿ ಜ್ಞಾನದ ಬೆಳವಣಿಗೆ ಜೊತೆಗೆ ದೈಹಿಕ ಬೆಳವಣಿಗೆಯೂ ಸಹ ಆಗುತ್ತಾ ಹೋಗುತ್ತದೆ. ಈ ಸಂದರ್ಭದಲ್ಲಿ ಯುವಕ, ಯುವತಿಯರು ಕೆಲವೊಂದು ನೀತಿ ನಿಯಮಗಳನ್ನು ಅಳವಡಿಸಿಕೊಳ್ಳಬೇಕಿದೆ. ಪ್ರತಿಯೊಂದು ಹಂತದಲ್ಲೂ ಶಿಕ್ಷಕರಿಂದ ಮಾರ್ಗದರ್ಶನ ಪಡೆದು ಹೆಜ್ಜೆ ಇಡಬೇಕಾಗಿದೆ. ಕಾನೂನು ಬಾಹಿರ ಚಟುವಟಿಕೆಗಳ ಹಾಗೂ ದುಶ್ಚಟಗಳಿಂದ ವಿದ್ಯಾರ್ಥಿಗಳು ದೂರವಿರಬೇಕು. ವಿದ್ಯಾರ್ಥಿಗಳು ಬದುಕಿನಲ್ಲಿ ಉತ್ತಮ ಗುರಿ ಸಾಧಿಸುವ ಛಲವನ್ನು ಹೊಂದಬೇಕು ಎಂದರು.

     ಕಾರ್ಯಕ್ರಮದಲ್ಲಿ ಬಿಆರ್‍ಸಿ ಮಂಜಪ್ಪ, ಅಕ್ಷರ ದಾಸೋಹ ಅಧಿಕಾರಿ ತಿಪ್ಪೇಸ್ವಾಮಿ, ಸಿಆರ್‍ಪಿ ರುದ್ರಮುನಿ, ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಟಿ.ವೀರಭದ್ರಸ್ವಾಮಿ ಮುಂತಾದವರು ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ಜೆ.ಕೆ.ಶ್ರೀನಿವಾಸ್ ಸ್ವಾಗತಿಸಿ ವಂದಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap