ತುಮಕೂರು:
ಕೆರೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರು ತಾಲ್ಲೂಕಿನಲ್ಲಿ ಇಂದು ನಡೆದಿದೆ.
ಬಂದ್ರೆಹಳ್ಳಿಯ ತಾಂಡ್ಯದ ಶಿವಕುಮಾರ್ ಎಂಬಾತ ಮೀನು ಹಿಡಿಯಲು ಹೋಗಿ ಕಾಲು ಜಾರಿ ಕೆರೆಗೆ ಬಿದ್ದ ಪರಿಣಾಮ ಮೃತ ಪಟ್ಟಿದ್ದಾನೆ. ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣವನ್ನು ದಾಖಲಿಸಲಾಗಿದೆ.
ಕೆರೆಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ತಿಪಟೂರು ತಾಲ್ಲೂಕಿನಲ್ಲಿ ನಡೆದಿದೆ. ತಿಪಟೂರು ತಾಲ್ಲೂಕು ನೊಣವಿನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಗಂಗನಕಟ್ಟೆಯ ಉಮೇಶ್ ಎಂಬುವವರು ಕೆರೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾರೆ. ಈ ಪ್ರಕರಣವನ್ನು ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ