2022 ರೊಳಗೆ ದೇಶದ ಪ್ರತಿಯೊಬ್ಬರಿಗೂ ಮನೆ

ದಾವಣಗೆರೆ:

     ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕೇಂದ್ರ ಸರ್ಕಾರ 2022 ರೊಳಗೆ ದೇಶದ ಪ್ರತಿಯೊಬ್ಬರಿಗೂ ಮನೆ ನೀಡುವ ಉದ್ದೇಶ ಹೊಂದಿದೆ ಎಂದು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದ್ದಾರೆ.

     ದಾವಣಗೆರೆ ತಾಲ್ಲೂಕಿನ ಅಣಜಿ ಗ್ರಾಮದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸೂರು ರಹಿತರನ್ನು ಗುರುತಿಸಿ 2022 ರೊಳಗೆ ದೇಶದಲ್ಲಿ 1 ಕೋಟಿ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಈ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಸುತ್ತೋಲೆ ಈಗಾಗಲೇ ರಾಜ್ಯದ ಎಲ್ಲ ಗ್ರಾಮಪಂಚಾಯತಿಗಳಿಗೆ ತಲುಪಿದೆ ಎಂದರು.

      ಕೇಂದ್ರ ಸರ್ಕಾರ ಸುಮಾರು 23 ಕ್ಕೂ ಹೆಚ್ಚು ದವಸ ಧಾನ್ಯಗಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಿಸಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಭತ್ತ ಮತ್ತು ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಕ್ಕೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದರು. ಮೆಕ್ಕೆಜೋಳವನ್ನು ಆಹಾರಧಾನ್ಯವಲ್ಲವೆಂದು ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ತೆರೆಯದೆ ಪಡಿತರದಲ್ಲಿ ಮೆಕ್ಕೇಜೋಳ ವಿತರಿಸಲಾಗುತ್ತಿಲ್ಲ. ಆದರೆ ಬೇರೆ ರಾಜ್ಯಗಳಲ್ಲಿ ಇದನ್ನು ಆಹಾರಧಾನ್ಯವಾಗಿ ಪರಿಗಣಿಸಲಾಗಿದೆ. ಹಾಗೆಯೇ ರಾಜ್ಯದಲ್ಲೂ ಇದೇ ಪದ್ಧತಿ ಜಾರಿಗೆ ತರಬೇಕು, ಮತ್ತು ಕೂಡಲೇ ಖರೀದಿ ಕೇಂದ್ರ ತೆರೆಯಬೇಕೆಂದು ಸಿದ್ದೇಶ್ವರ್ ಒತ್ತಾಯಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap