ಬೆಂಗಳೂರು:
ಸಚಿವ ಸಂಪುಟ ವಿಸ್ತರಣೆಗೆ ಅಕ್ಟೋಬರ್ 10 ರಂದು ಕಾಂಗ್ರೆಸ್ ಹೈಕಮಾಂಡ್ ಮುಹೂರ್ತ ನಿಗಧಿಗೊಳಿಸಿದೆ. ಲೋಕಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸಂಪುಟ ವಿಸ್ತರಣೆಗೆ ಮುಂದಾಗಿದೆ.
ಪಕ್ಷ ಸಂಘಟನೆಗೆ ಒತ್ತು ನೀಡುವ ಉದ್ದೇಶದಿಂದಾಗಿ ಹಾಗೂ ಆರ್ಥಿಕ ಸಂಪನ್ಮೂಲ ಒದಗಿಸುವ ಶಾಸಕರಿಗೆ ಸಚಿವ ಸ್ಥಾನವನ್ನು ನೀಡಲು, ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ತೋರಿಸಿದೆ, ಇದರ ಬೆನ್ನ ಹಿಂದೆಯೇ ಕಾಂಗ್ರೆಸ್ ನಾಯಕರು ಹೈಕಮಾಂಡ್ ಭೇಟಿ ಮಾಡಲು ನಿರ್ಧರಿಸಿದ್ದಾರೆ.
ರಾಮಲಿಂಗಾರೆಡ್ಡಿ, ನಾಗೇಂದ್ರ, ಆನಂದ್‍ಸಿಂಗ್, ಎಂ.ಬಿ.ಪಾಟೀಲ್, ಡಾ.ಕೆ.ಸುಧಾಕರ್, ನಾಗೇಶ್, ಶಿವರಾಂ ಹೆಬ್ಬಾರ್, ಬಿ.ಕೆ.ಸಂಗಮೇಶ್ ಅವರು ಸಚಿವಸ್ಥಾನದ ರೇಸಿನಲ್ಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ