ಶಿರಾ:
ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಗೋಡು ಗೇಟ್ ಸಮೀಪ ಸೋಮವಾರ ನಡೆದಿದೆ.
ತಾಲ್ಲೂಕಿನ ದೊಡ್ಡನಹಳ್ಳಿ ಗ್ರಾಮದ ನಿವಾಸಿ ಅನಂತಪ್ಪ(50) ಹಾಗು ತಾಯಮ್ಮ (58) ಮೃತರು ಎಂದು ಗುರುತಿಸಲಾಗಿದೆ.
ಬೆಳಗ್ಗೆ 11.30ರ ಸುಮಾರಿಗೆ ಮಾಗೋಡು ಗೇಟ್ ಮೂಲಕ ಮಧುಗಿರಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಶಿರಾ ನಗರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








