ಹೊಸಪೇಟೆ :
ಶಾಸಕ ಆನಂದಸಿಂಗ್ ಅವರ 53ನೇ ಹುಟ್ಟುಹಬ್ಬದ ನಿಮಿತ್ತ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದ ರೋಟರಿ ವೃತ್ತದಲ್ಲಿ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಬಳಿಕ ರಸ್ತೆಯಲ್ಲಿ ಹೋಗುತ್ತಿದ್ದ ಪಾದಾಚಾರಿಗಳಿಗೆ ಹೂವಿನ ಸಸಿಗಳನ್ನು ವಿತರಿಸಿದರು. ಈ ವೇಳೆ ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆ.ರವಿಕುಮಾರ್ ಮಾತನಾಡಿ, ಶಾಸಕ ಆನಂದಸಿಂಗ್ ಅವರು ವಿಜಯನಗರ ಕ್ಷೇತ್ರದ ಅಭಿವೃದ್ದಿಯ ಹರಿಕಾರರಾಗಿದ್ದು, ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಅವಿರತ ಶ್ರಮಿಸುತ್ತಿದ್ದಾರೆ. ಹೀಗಾಗಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರಿಗೆ ದೇವರು ಆರೋಗ್ಯ, ಆಯುಷ್ಯ ಹೆಚ್ಚಾಗಿ ಕರುಣಿಸಲಿ ಎಂದು ಹಾರೈಸಿದರು.
ಈ ಸಂಧರ್ಭದಲ್ಲಿ ನಗರಸಭಾ ಸದಸ್ಯರಾದ ಎ.ಬಸವರಾಜ, ಕುಲ್ಲಾಯಪ್ಪ, ರೋಹಿಣಿ ವೆಂಕಟೇಶ್, ಮುಖಂಡರಾದ ರವಿ, ರಾಮು, ಬಾಬು, ಪೆನ್ನಪ್ಪ, ರಮೇಶ, ರಘು, ಗಂಗಮ್ಮ, ಮುಮ್ತಾಜ್, ಮಂಜಮ್ಮ, ವಿಜಯಾ ಸೇರಿದಂತೆ ಇತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








