ವನ್ಯಜೀವಿಗಳಿಂದ ಮೃತರಾದ ಕುಟುಂಬದವರಿಗೆ ಪ್ರತಿ ತಿಂಗಳು ರೂ. 2000 ಮಾಸಾಶನ

ಬೆಂಗಳೂರು

     ಇನ್ನು ಮುಂದೆ ವನ್ಯಜೀವಿಗಳಿಂದ ಮೃತರಾದ ಕುಟುಂಬದವರಿಗೆ ಪ್ರತಿ ತಿಂಗಳು ರೂ. 2000 ಮಾಸಾಶನವನ್ನು ನೀಡಲು ಇಂದಿನ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

       ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಈ ವಿಷಯ ತಿಳಿಸಿದ್ದು, ಇದುವರೆಗೂ ವನ್ಯಜೀವಿಗಳಿಂದ ಮೃತರಾದ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ಧನ ನೀಡಲಾಗುತ್ತಿತ್ತು. ಅದರ ಜೊತೆಗೆ ಈಗ 5 ವರ್ಷದ ವರೆಗೆ ಮಾಸಾಶನವನ್ನು ಸಹ ನೀಡಲಾಗುವುದು ಎಂದರು.

       ರಾಜ್ಯದ ಬಾಗಲಕೋಟೆ, ಧಾರವಾಡ, ಕೋಲಾರ, ಮಂಡ್ಯ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತೋಟಗಾರಿಕೆ ಉತ್ಕøಷ್ಟ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇವುಗಳ ನಿರ್ವಹಣೆಗೆ ಕರ್ನಾಟಕ ರಾಜ್ಯ ತೋಟಗಾರಿಕೆ ಉತ್ಕøಷ್ಟ ಕೇಂದ್ರ ಏಜೆನ್ಸಿಗಳನ್ನು ಸ್ಥಾಪನೆ ಮಾಡಲು 60 ಕೋಟಿ ರೂ. ಗಳನ್ನು ಒದಗಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.

      108 ಆಂಬ್ಯುಲೆನ್ಸ್ ಸೇವೆಗೆ 2009ರಲ್ಲಿ ಮಾಡಿಕೊಳ್ಳಲಾಗಿದ್ದ ಕರಾರು ಮುಗಿದ್ದಿದ್ದು, ಮುಂದಿನ ಒಂದು ವರ್ಷದ ಅವಧಿಯೊಳಗೆ ಹೊಸ ಟೆಂಡರ್ ಪ್ರಕ್ರಿಯೆ ಮುಗಿಸಲು ಹಾಗೂ ಅದುವರೆಗೂ ಈಗಿರುವ ಕರಾರನ್ನು ಮುಂದುವರೆಸಲು ಸಮ್ಮತಿಸಲಾಗಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ