ಕೈಗಾರಿಕಾ ಚಟುವಟಕೆಗಳಿಲ್ಲದೆ ರಾಷ್ಟ್ರದ ಅಭಿವೃದ್ಧಿ ಸಾಧ್ಯವಿಲ್ಲ

ಬೆಂಗಳೂರು

      ಕೈಗಾರಿಕಾ ಚಟುವಟಕೆಗಳಿಲ್ಲದೆ ರಾಷ್ಟ್ರದ ಅಭಿವೃದ್ಧಿ ಸಾಧ್ಯವಿಲ್ಲದಿರುವುದನ್ನು ಗಂಭೀರವಾಗಿ ಪರಿಗಣಿಸಿ ದೇಶದಲ್ಲಿ ಕೈಗಾರಿಕ ಕ್ರಾಂತಿ ನಡೆಸಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬೇಕು ಎಂದು ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

      ನಗರದ ಕಸ್ತೂರಬಾ ರಸ್ತೆಯ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ಗೋಷ್ಠಿ-2018 `ಕೈಗಾರಿಕ ಕ್ರಾಂತಿ 4.0: ನಾವು ತಯಾರಿಯ ಕುರಿತ ಸಂವಾದಲ್ಲಿ ಭಾಗವಹಿಸಿದ್ದ ದೇಶದ 32 ರಾಜ್ಯಗಳ ಪ್ರೌಢಶಾಲಾ ವಿದ್ಯಾರ್ಥಿಗಳು ಕೈಗಾರಿಕಾ ಕ್ರಾಂತಿಯ ಒತ್ತಾಯ ಮಾಡಿದರು.

    ಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದ ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕ ಪ್ರೊ.ಎಸ್.ಸದಗೋಪಾನ್, ವಿಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ಅವಿಷ್ಕಾರಗಳು ಮನುಷ್ಯನ ಜೀವನಮಟ್ಟವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸಿವೆ.ಈ ದಿಸೆಯಲ್ಲಿ ಇನ್ನೂ ಹೆಚ್ಚಿನ ಸಂಶೋಧನೆ, ಪ್ರಯತ್ನಗಳ ಅವಶ್ಯಕತೆಯಿದೆ.

    ವಿಜ್ಞಾನ ವಿದ್ಯಾರ್ಥಿಗಳು ಇದಕ್ಕೆ ಹೆಚ್ಚಿನ ಆಸಕ್ತಿ ತೋರಿಸಬೇಕು ಎಂದರು ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಈ ವಿಜ್ಞಾನಗೋಷ್ಠಿಯನ್ನು ರಾಷ್ಟ್ರೀಯ ವಿಜ್ಞಾನ ವಸ್ತುಸಂಗ್ರಹಾಲಯಗಳ ಪರಿಷತ್ತು ಏರ್ಪಡಿಸಿದ್ದು, ರಾಜ್ಯದಿಂದ ಪ್ರತಿನಿಧಿಸುವ ಒಬ್ಬ ವಿದ್ಯಾರ್ಥಿಯಂತೆ, ಈಶಾನ್ಯ ಭಾರತದ ರಾಜ್ಯಗಳು ಸೇರಿದಂತೆ ಒಟ್ಟು 32 ರಾಜ್ಯಗಳ ಪ್ರೌಢಶಾಲಾ ವಿದ್ಯಾರ್ಥಿಗಳು, ಈ ಗೋಷ್ಠಿಯಲ್ಲಿ ಪಾಲ್ಗೊಂಡು, ಕೈಗಾರಿಕೆ, ದೇಶದ ಅಭಿವದ್ಧಿ ವಿಷಯ ಹಾಗೂ ವಿವಿಧ ಯೋಜನೆಗಳ ಕುರಿತು ಮಾತನಾಡುವ ಮೂಲಕ ಗಮನ ಸೆಳೆದರು.
ತಮಿಳುನಾಡಿನ ತಿರುನೆಲ್ವೇಲಿ ಖಾಸಗಿ ಶಾಲೆಯ ವಿದ್ಯಾರ್ಥಿನಿ ಎ.ದೀಪಿಕಾ, ಮಾತನಾಡಿ, ಕೈಗಾರಿಕಾ ವಲಯವು ಕಷಿ, ಉತ್ಪಾದನೆ, ಗಣಿಗಾರಿಕೆ ಮತ್ತು ಸಾರಿಗೆಯಲ್ಲಿ ಪ್ರಮುಖ ಬದಲಾವಣೆಗಳಿಂದ ಸಾಮಾಜಿಕ ಆರ್ಥಿಕ ಮತ್ತು ಸಾಂಸ್ಕøತಿಕ ಸ್ಥಿತಿಗತಿಗಳ ಮೇಲೆ ಗಾಢಪರಿಣಾಮ ಬೀರಿತು.

     ಯುನೈಟೆಡ್ ಕಿಂಗ್‍ಡಮ್‍ನಲ್ಲಿ ಪ್ರಾರಂಭವಾದ ಕೈಗಾರಿಕಾ ಕ್ರಾಂತಿ ತರುವಾಯ ಯುರೋಪ್‍ನಾದ್ಯಂತ, ಉತ್ತರ ಅಮೆರಿಕ ಮತ್ತು ಅಂತಿಮವಾಗಿ ವಿಶ್ವದಲ್ಲಿ ಹರಡಿತು. ಕೈಗಾರಿಕಾ ಕ್ರಾಂತಿಯ ಪ್ರಾರಂಭವು ಮಾನವ ಇತಿಹಾಸದಲ್ಲಿ ಪ್ರಮುಖ ತಿರುವೆಂದು ಗುರುತಿಸಲಾಗಿದೆ. ಬಹುತೇಕ ಜನಜೀವನದ ಪ್ರತಿಯೊಂದು ಅಂಶದ ಮೇಲೆ ಅಂತಿಮವಾಗಿ ಕೆಲವು ರೀತಿಯಲ್ಲಿ ಪ್ರಭಾವ ಬೀರಿತು ಎಂದು ಅಭಿಪ್ರಾಯಪಟ್ಟರು.
ಮತ್ತೊಬ್ಬ ವಿದ್ಯಾರ್ಥಿ ಹೇಮಂತ್ ಮಾತನಾಡಿ, ಕೈಗಾರಿಕಾ ಕುರಿತು ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡಿಸುವ ಕೆಲಸ ನಡೆಯಬೇಕು.

     ಜೊತೆಗೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಸ್ತು ಸಂಗ್ರಹಾಲಯ ನಿರ್ದೇಶಕ ಕೆ.ಮದನ್ ಗೋಪಾಲ್ ಸೇರಿ ಪ್ರಮುಖರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link