ಬೆಂಗಳೂರು:
ನೈರುತ್ಯ ಮುಂಗಾರು ರಾಜ್ಯದ ಕರಾವಳಿಯಲ್ಲಿ ಚುರುಕುಗೊಂಡಿದೆ. ಆದರೆ ಉತ್ತರ ಒಳನಾಡಿನಲ್ಲಿ ದುರ್ಬಲಗೊಂಡಿದ್ದು, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗಿದೆ.
ಕೊಲ್ಲೂರು 8, ಗೇರುಸೊಪ್ಪ. ಲಿಂಗನಮಕ್ಕಿ 6, ಬಂಟ್ವಾಳ, ಹೊನ್ನಾವರ5, ಕುಂದಾಪುರ, ಕೋಟಾ, ಮಂಕಿ, ಕುಮಟ, ಕಾರವಾರದಲ್ಲಿ ತಲಾ 4 ಸೆಂಟಿ ಮೀಟರ್ ಮಳೆ ಬಿದ್ದಿದೆ. ಕಾರವಾರದಲ್ಲಿ ಗರಿಷ್ಠ 35.4, ಬೀದರ್ನಲ್ಲಿ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುನ್ಸೂಚನೆಯಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಗರಿಷ್ಠ 27, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷೆಯಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








