ಮಂಡ್ಯ ಲೋಕಸಭಾ ಚುನಾವಣೆ : ‘ಕೈ’ ಅಭ್ಯರ್ಥಿ ಕಣಕ್ಕಿಳಿಸಲು ಆಗ್ರಹ

ನಾಗಮಂಗಲ: 

      ಮಂಡ್ಯ ಲೋಕಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಮಾಜಿ ಸಚಿವ ಚಲುವರಾಯಸ್ವಾಮಿ ಅವರು ಕಾಂಗ್ರೆಸ್ ನಾಯಕರನ್ನು ಒತ್ತಾಯಿಸಿದ್ದಾರೆ.

      ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಮಾತನಾಡುತ್ತಿದ್ದ ಅವರು, ನಾನು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ಆಗಲ್ಲ. ಆದರೆ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿ ಹಾಕಲ್ಲ ಎಂದು ಎಲ್ಲೂ ಹೇಳಿಲ್ಲ. ಈ ಬಗ್ಗೆ ರಾಜ್ಯ ನಾಯಕರು ಸಹ ಯಾವುದೇ ತೀರ್ಮಾನ ಕೈಗೊಂಡಿಲ್ಲ ಹೇಳಿದ್ದಾರೆ.

      ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಮೈತ್ರಿಯು ವಿಧಾನಸಭೆಗೆ ಮಾತ್ರ ಸೀಮಿತವಾಗಿದ್ದು, ಲೋಕಸಭಾ ಚುನಾವಣೆಗೆ ಅದು ಅನ್ವಹಿಸುವುದಿಲ್ಲ. ಮಂಡ್ಯದಲ್ಲಿ ಜೆಡಿಎಸ್ ಬಲಿಷ್ಠ ವಾಗಿದ್ದರೂ ಮಂಡ್ಯದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಇತಿಹಾಸ ಇದೆ. ಸಿದ್ದರಾಮಯ್ಯ, ಗುಂಡೂರಾವ್ ಮುಂದೆ ಅಭ್ಯರ್ಥಿ ಹಾಕಲೇಬೇಕೆಂದು ಒತ್ತಡ ಹಾಕುವೆ ಎಂದು ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ