ಲೋಕಸಭಾ ಉಪ-ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು :

      ನವೆಂಬರ್ 3 ರಂದು ನಡೆಯಲಿರುವ ಲೋಕಸಭೆ ಉಪಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

      ಇಂದಿನಿಂದ(ಅ.9) ಅಕ್ಟೋಬರ್ 16 ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಇಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೂ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ.

      ಅಕ್ಟೋಬರ್ 20 ರ ಒಳಗೆ ನಾಮಪತ್ರ ವಾಪಸ್ ಪಡೆಯಲು ಅವಕಾಶ ವಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಭ್ಯರ್ಥಿಗಳ ನಾಮಪತ್ರ ಸ್ವೀಕರಿಸಲಾಗುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಗೊಂದಲ ಮುಂದುವರೆದಿದೆ.

Recent Articles

spot_img

Related Stories

Share via
Copy link