ದೆಹಲಿ:
ಪುರಿಯ ಇತಿಹಾಸ ಪ್ರಸಿದ್ಧ ಜಗನ್ನಾಥ ದೇವಾಲಯವನ್ನು ಪೊಲೀಸರು ಶೂ ಧರಿಸಿ, ಶಸ್ತ್ರಾಸ್ತ್ರ ಹಿಡಿದು ಪ್ರವೇಶಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ದೇವರ ದರ್ಶನಕ್ಕಾಗಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದ ಸರತಿಸಾಲು ಪದ್ಧತಿ ವಿರೋಧಿಸಿ ಭಕ್ತರು ಅಕ್ಟೋಬರ್ 3ರಂದು ಪ್ರತಿಭಟನೆ ನಡೆಸಿದ್ದರು. ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದವು. ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ, ಒಂಬತ್ತು ಪೊಲೀಸರು ಗಾಯಗೊಂಡಿದ್ದರು. ಈ ಹಿಂಸಾಚಾರವನ್ನು ಉಲ್ಲೇಖಿಸಿ ಸುಪ್ರೀಂ ಈ ರೀತಿ ಸೂಚನೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ