ಜಿಲ್ಲಾ ಮಟ್ಟದ ಕ್ರೀಡಾಕೂಟ

ಹಾವೇರಿ :

           ನಗರದ ಹೊಸಮನಿ ಸಿದ್ಧಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಸಹಯೋಗದಲ್ಲಿ ಇತ್ತಿಚ್ಚಿಗೆ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹುಕ್ಕೇರಿಮಠದ ರಾಚೋಟೇಶ್ವರ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಬಾಸ್ಕೇಟ್‍ಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿನಿಯರ ತಂಡವನ್ನು ಹುಕ್ಕೇರಿಮಠದ ಪರಮಪೂಜ್ಯ ಶ್ರೀ ಮ.ನಿ.ಪ್ರ. ಸದಾಶಿವ ಮಹಾಸ್ವಾಮಿಗಳು, ಶಿವಲಿಂಗೇಶ್ವರ ವಿದ್ಯಾಪೀಠದ ಸರ್ವ ಪದಾಧಿಕಾರಿಗಳು, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Recent Articles

spot_img

Related Stories

Share via
Copy link