ದಾವಣಗೆರೆ:
ಇತ್ತೀಚೆಗೆ ಚಿತ್ರದುರ್ಗದ ಎಸ್.ಜೆ.ಎಂ. ಕಾಲೇಜಿನ ಆಶ್ರಯದಲ್ಲಿ ನಡೆದ ದಾವಣಗೆರೆ ವಿವಿಯ ಅಂತರ್ ಕಾಲೇಜು ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ದಾವಣಗೆರೆಯ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಏಜುಕೇಷನ್ ಕಾಲೇಜಿನ ವಿದ್ಯಾಥಿಗಳು ಪ್ರಥಮ ಸ್ಥಾನ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಈ ವಿಜೇತ ಕ್ರೀಡಾಪಟುಗಳಿಗೆ ಕಾಲೇಜಿನ ಅಧ್ಯಕ್ಷ ಅಥಣಿ ವೀರಣ್ಣ, ಪ್ರಾಂಶುಪಾಲ ಡಾ.ಟಿ.ವೀರಪ್ಪ, ನಿರ್ದೇಶಕ ಡಾ.ತ್ರಿಭುವನಂದಸ್ವಾಮಿ, ದೈಹಿಕ ನಿರ್ದೇಶಕ ಜಿ.ಆರ್.ಸದಾಶಿವ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ