ಫೀಫಾ ಏಷಿಯಾ ಯು-18 ಮಹಿಳಾ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿ

ಬೆಂಗಳೂರು:

       ಫೀಫಾ ಏಷಿಯಾ ಯು-18 ಮಹಿಳಾ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿ ಇದೇ ತಿಂಗಳ 28 ರಿಂದ ನ.3 ರವರೆಗೆ ನಗರದ ಕಂಠೀರವ ಹಾಗೂ ಕೋರಮಂಗಲ ಸ್ಟೇಡಿಯಂಗಳ್ಲಲಿ ನಡೆಯಲಿದ್ದು, ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಕ್ರೀಡಾ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.

       ವಿಧನಾಸೌಧದಲ್ಲಿ ಅಧಿಕಾರಿಗಳೊಂದಿಗೆ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾತನಾಡಿ, ಸತತ ಮೂರನೇ ಬಾರಿಗೆ ಬೆಂಗಳೂರಿನಲ್ಲಿ ಫೀಫಾ ಏಷಿಯಾ ಅಂಡರ್ 18 ಮಹಿಳಾ ಬ್ಯಾಸ್ಕೆ?ಟ್ಟ್ಟಟ್ ಬಾಲ್ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದರು.

       ಆಸ್ಟ್ರೆಲಿಯಾ, ನ್ಯೂಜಿಲ್ಯಾಂಡ್, ಚೈನಾ, ಜಪಾನ್, ಮಲೇಶಿಯಾ, ಇಂಡೋನೇಶಿಯಾ ಸೇರಿದಂತೆ ಒಟ್ಟು 16 ರಾಷ್ಟ್ರದಿಂದ 16 ತಂಡಗಳ 320 ಆಟಗಾರ್ತಿಯರು ಆಗಮಿಸುತ್ತಿದ್ದಾರೆ. ಇವರಿಗೆ ಅಗತ್ಯ ಸೌಕರ್ಯ, ಸಾರಿಗೆ, ಆರೋಗ್ಯ, ವಸತಿ ಸೇರಿದಂತೆ ಎಲ್ಲ ಸೌಕರ್ಯ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

      ಎರಡು ಕೋಟಿ ರು. ವೆಚ್ಚದಲ್ಲಿ ಸ್ಟೇಡಿಯಂನನ್ನು ಮೇಲ್ದರ್ಜೆಗೇರಿಸಿದ್ದು, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ಇದಾಗಿದೆ. ಈ ಬಾರಿ ಪಂದ್ಯಾವಳಿ ವೀಕ್ಷಿಸಲು ಪ್ರವೇಶ ಶುಲ್ಕವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಅಕ್ಟೋಬರ್ 27 ಕ್ಕೆ ಇದರ ಉದ್ಘಾಟನೆ ನೆರವೇರಲಿದೆ. ರಾಜ್ಯಪಾಲ ವಜೂಭಾಯಿ ವಾಲಾ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link