ಎನ್ ಕೌಂಟರ್ : ಮೂವರು ಉಗ್ರರ ಹತ್ಯೆ

ಶ್ರೀನಗರ:  

      ಶ್ರೀನಗರದ ಫಾತೇ ಕದಲ್‌ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾಪಡೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದು, ಓರ್ವ ಪೊಲೀಸ್‌ ಅಧಿಕಾರಿ ಹುತಾತ್ಮರಾಗಿದ್ದಾರೆ.

      ಬುಧವಾರ ಮುಂಜಾನೆ ಫಾತೇ ಕದಲ್‌ನಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾಪಡೆಯೊಂದಿಗೆ ರಾಷ್ಟ್ರೀಯ ಶಶಸ್ತ್ರ ಪಡೆ ಮತ್ತು ಕೇಂದ್ರ ಮೀಸಲು ಪಡೆ ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಮೂವರು ಉಗ್ರರು ಬಲಿಯಾಗಿದ್ದಾರೆ.

      ಘಟನೆಯಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬರು ಮೃತಪಟ್ಟಿದ್ದಾರೆ. ಮನೆಯೊಂದರಲ್ಲಿ ಮೂವರು ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ  ಮಾಹಿತಿ ಪಡೆದ ಪೊಲೀಸರು ಸೇನಾ ಯೋಧರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಉಗ್ರರು ಅಡಗಿದ್ದ ಮನೆಯನ್ನು ಯೋಧರು ಮತ್ತು ಪೊಲೀಸರು ಸುತ್ತುವರಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದ ಯೋಧರು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. 

 

 

Recent Articles

spot_img

Related Stories

Share via
Copy link