ಶ್ರೀನಗರ:

ಕಾಶ್ಮೀರದ ಬಾರಾಮುಲ್ಲಾ ಸೆಕ್ಟರ್ ನಲ್ಲಿ ಭಾರತೀಯ ಸೇನೆ ಶುಕ್ರವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 4 ಉಗ್ರರನ್ನು ಹತ್ಯೆ ಮಾಡಿದೆ.
ಬಾರಾಮುಲ್ಲಾದ ಗಡಿ ನಿಯಂತ್ರಣ ರೇಖೆ ಬಳಿ ನಾಲ್ವರು ಉಗ್ರರ ಹತ್ಯೆ ಆಗಿರುವುದಾಗಿ ಸೇನಾ ಮೂಲಗಳು ಮಾಹಿತಿ ನೀಡಿವೆ.
ಉರಿ ಬಳಿಯಿರುವ ಬೊನಿಯಾರ್ ಅರಣ್ಯ ಪ್ರದೇಶದಲ್ಲಿ ಸೇನೆ ಎನ್’ಕೌಂಟರ್ ನಡೆಸಿದ್ದು, ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಹತ್ಯೆಯಾದ ಉಗ್ರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ, ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾ ಮೂಲಗಲು ತಿಳಿಸಿವೆ .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ