ಬೆಂಗಳೂರು
ದೋಸ್ತಿಗಳನ್ನು ಮುನ್ನಡೆಸಬೇಕಾದ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳದಿರಲು ನಿರ್ಧರಿಸಿದ್ದಾರೆ.
ಆದರೆ ಉಳಿದ ಮೂರು ಲೋಕಸಭೆ ಮತ್ತು ಒಂದು ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಒಳಗೊಂಡಂತೆ ಮೈತ್ರಿ ಪಕ್ಷದ ಪರವಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ರಾಮನಗರದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರ ಪತ್ನಿ ಅನಿತಾ ಕುಮಾರ ಸ್ವಾಮಿ ಸ್ಪರ್ಧಿಸಿದ್ದು, ಈ ಕ್ಷೇತ್ರದ ಪ್ರಚಾರದಿಂದ ದೂರ ಉಳಿಯಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಹಾಗೂ ಸೋಮವಾರದಿಂದ ಈ ಮಾಸಾಂತ್ಯದವರೆಗೆ ರಾಜ್ಯದಲ್ಲಿ ನವೆಂಬರ್ 3 ರಂದು ನಡೆಯಲಿರುವ ಮೂರು ಲೋಕಸಭೆ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಇದೇ 23, 24ರಂದು, ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಿರುವ ಮಂಡ್ಯ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಇದೇ 24, 25ರಂದು, ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ 26, 27 ಹಾಗೂ 30, 31ರಂದು, ಪ್ರಚಾರ ಕಾರ್ಯದಲ್ಲಿ ನಿರತರಾಗಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ