ಕ್ರೀಡಾಂಗಣ ನಿರ್ಮಿಸಲು 17 ಕೋಟಿ ರೂಪಾಯಿ:ಡಿಸಿಎಂ

ಬೆಂಗಳೂರು

       ಕಂಠೀರವ ಕ್ರೀಡಾಂಗಣ ಮಾದರಿಯಲ್ಲೇ ಬೆಂಗಳೂರು ನಗರದ ನಾಲ್ಕು ಭಾಗಗಳಲ್ಲಿ ಕ್ರೀಡಾಂಗಣ ನಿರ್ಮಿಸಲು 17 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

       ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನವೀಕರಣಗೊಂಡ ಒಳಾಂಗಣ ಕ್ರೀಡಾಂಗಣ ಉದ್ಘಾಟಿಸಿ ಮಾತನಾಡಿ, ಕಳೆದ ಬಜೆಟ್‍ನಲ್ಲಿ ಕಂಠೀರವ ಕ್ರೀಡಾಂಗಣ ಮಾದರಿಯಲ್ಲೇ ನಗರದ ದೇವನಹಳ್ಳಿ, ತಾವರೆಕೆರೆ, ಗುಂಜೂರು, ಎಚ್.ಎಸ್‍ಆರ್ ಲೇಔಟ್‍ನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಹಣ ಮಂಜೂರು ಮಾಡಿದ್ದು, ಎರಡು ಕಡೆಗಳಲ್ಲಿ ಕಾಮಗಾರಿ ಆರಂಭಿಕ ಹಂತದಲ್ಲಿದೆ ಎಂದರು. 10 ವರ್ಷ ಹಳೆಯ ಸಿಂಥೆಟಿಕ್ ಟ್ರಾಕ್ ಮೇಲ್ದರ್ಜೆಗೇರಿಸಲು, 3 ಕೋಟಿ 50 ಲಕ್ಷ ರೂಪಾಯಿ ಮೊತ್ತದ ಟೆಂಡರ್ ಕರೆಯಲಾಗಿದ್ದು, ಒಂದು ತಿಂಗಳೊಳಗಾಗಿ ಕಾಮಗಾರಿ ಪ್ರಾರಂಭವಾಗಲಿದೆ. ಇಲ್ಲಿನ ಮೂರು ಬ್ಯಾಸ್ಕೆಟ್‍ಬಾಲ್ ಕೋರ್ಟ್‍ಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಮೇಲ್ದರ್ಜೆಗೇರಿಸಲಾಗಿದೆ ಎಂದರು.

      ಅಕ್ಟೋಬರ್ 28 ರಿಂದ ನ. 3 ರವರೆಗೆ ಫೀಫಾ ಏಷಿಯನ್ ಮಹಿಳಾ ಬ್ಯಾಸ್ಕೆಟ್ ಬಾಲ್ ಪಂದ್ಯಾವಳಿ ನಡೆಯಲಿದ್ದು, ಇದೇ 27ರಂದು ರಾಜ್ಯಪಾಲರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ ಎಂದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link