ತುರುವೇಕೆರೆ
ಗ್ರಾಮೀಣ ಪ್ರದೇಶದಲ್ಲಿನ ಜನರು ಸ್ವಚ್ಛತೆಗೆ ಹೆಚ್ಚು ಗಮನ ಹರಿಸಬೇಕು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಕೆ.ಎಲ್.ಅನಂತರಾಮು ತಿಳಿಸಿದರು
ತಾಲ್ಲೂಕಿನ ಸಂಗಲಾಪುರ ಗ್ರಾಮದಲ್ಲಿ ಒಂದು ವಾರ ಕಾಲೇಜು ವತಿಯಿಂದ ಹಮ್ಮಿಕೊಂಡಿದ್ದ ಎನ್.ಎಸ್.ಎಸ್ ವಿದ್ಯಾರ್ಥಿಗಳ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಒಂದ ವಾರದಿಂದ ಗ್ರಾಮದ ಬಹುತೇಕ ಪ್ರದೇಶವನ್ನು ಸ್ವಚ್ಛಗೊಳಿಸಿ ಗ್ರಾಮಸ್ಥರ ಪ್ರಶಂಸಗೆ ಪಾತ್ರರಾಗಿದ್ದಿರಾ, ಇದೇ ರೀತಿ ನಿಮ್ಮ ಗ್ರಾಮಗಳಲ್ಲಿಯೂ ಸ್ವಚ್ಛತೆಯ ಬಗ್ಗೆ ಹೆಚ್ಚು ಗಮನ ಹರಿಸಿ ಎಂದು ತಿಳಿಸಿದರು.
ಮುಖಂಡ ಕೃಷ್ಣಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಒಂದು ವಾರದಲ್ಲಿ ಪರಿಶ್ರಮಪಟ್ಟು ಗ್ರಾಮದಲ್ಲಿರುವ ಚರಂಡಿ, ದೇವಸ್ಥಾನ ಆವರಣವನ್ನು ಸ್ವಚ್ಛಗೊಳಿಸಿ ಸುಂದರವನ್ನಾಗಿ ಮಾಡಿದ್ದಾರೆ. ಗ್ರಾಮಸ್ಥರು ಸಹ ಗ್ರಾಮದ ಮುಂದೆ ನಮ್ಮ ಮನೆಯ ಸುತ್ತಮುತ್ತ ಸ್ವಚ್ಛವಾಗಿಡುವ ಮೂಲಕ ಆದರ್ಶರಾಗಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ತಸಲೀಮುನ್ನಿಸಾ, ಉಪನ್ಯಾಸಕರಾದ ಆರ್.ವಿ.ನಟರಾಜು, ನಂಜೇಗೌಡ, ನಾಗರಾಜು, ರಾಮಣ್ಣ, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಇದ್ದರು.
