ನಾಳೆ ಕಿತ್ತೂರುರಾಣಿ ಚೆನ್ನಮ್ಮ ವಿಜಯೋತ್ಸವ

ದಾವಣಗೆರೆ:

    ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ಜಿಲ್ಲಾ ವೀರಶೈವ ಲಿಂಗಾಯತ ಪಂಚಮ ಸಾಲಿ ಸಮಾಜದ ವತಿಯಿಂದ ನಾಳೆ (ಅ.23ರಂದು) ಬೆಳಿಗ್ಗೆ 11ಕ್ಕೆ ಕಿತ್ತೂರುರಾಣಿಚೆನ್ನಮ್ಮ ವಿಜಯೋತ್ಸವ/ಜಯಂತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

       ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಾಳೆ ಬೆಳಿಗ್ಗೆ 10 ಗಂಟೆಗೆ ನಗರದ ಅರುಣಾ ವೃತ್ತದಲ್ಲಿರುವ ಕಿತ್ತೂರುರಾಣಿ ಚನ್ನಮ್ಮ ವೃತ್ತದಲ್ಲಿರುವ ಕಿತ್ತೂರುರಾಣಿ ಚನ್ನಮ್ಮನವರ ನಾಮಫಲಕ್ಕೆ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

     ನಂತರ ಶ್ರೀವಚನಾನಂದ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯುವ ಚನ್ನಮ್ಮ ಜಯಂತ್ಯುತ್ಸವವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್. ಶ್ರೀನಿವಾಸ್(ವಾಸು) ಉದ್ಘಾಟಿಸುವರು. ಶಾಸಕ ಎಸ್.ಎ. ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷೆ ಜಯಶೀಲಾ ಕೆ.ಆರ್, ಸಂಸದ ಜಿ. ಎಂ.ಸಿದ್ದೇಶ್ವರ, ಶಾಸಕ ಡಾ|| ಶಾಮನೂರು ಶಿವಶಂಕರಪ್ಪ, ಮೇಯರ್ ಶೋಭಾ ಪಲ್ಲಾಗಟೆ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಬಿ.ಸಿ. ಉಮಾಪತಿ ಮತ್ತಿತರರು ಭಾಗವಹಿಸುವರು. ಆದ್ದರಿಂದ ಈ ಕಾರ್ಯಕ್ರಮದಲ್ಲಿ ವೀರರಾಣಿಕಿತ್ತೂರುಚನ್ನಮ್ಮನ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆ ಕೋರಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link