ಹರಪನಹಳ್ಳಿ:

ಮನುಷ್ಯನಿಗೆ ಎಷ್ಟೆ ಹಣ, ಸಂಪತ್ತು ಇದ್ದು ಆರೋಗ್ಯ ಇಲ್ಲದಿದ್ದರೆ ಯಾವ ಹಣವು ಅವನನ್ನು ಉಳಿಸಲು ಸಾದ್ಯವಿಲ್ಲ, ಪ್ರತಿಯೊಬ್ಬ ವಿದ್ಯಾರ್ಥಿ ಕ್ರೀಡೆಯಲ್ಲಿ ಭಾಗವಹಿಸಿದರೆ ಸದೃಢ ಆರೋಗ್ಯವನ್ನು ಪಡೆಯಬಹುದು ಎಂದು ಉಪ ಪೋಲಿಸ್ ಅಧೀಕ್ಷಕರಾದ ನಾಗೇಶ್ ಐತಾಳ್ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ದಾವಣಗೆರೆ ವಿವಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಕಬ್ಬಡ್ಡಿ ಪಂದ್ಯಾವಳಿವನ್ನು ಪಾರಿವಾಳ ಹಾರಿಬಿಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಕ್ರೀಡೆಯಾದ ಕಬ್ಬಡ್ಡಿ ಪಂದ್ಯಾವಳಿ ಇಂದು ಪ್ರಚಲಿತ ಪಡೆದುಕೊಳ್ಳುತ್ತಿದೆ. ಇಂತಹ ಪಂದ್ಯಾವಳಿಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವ ಮುಲಕ ಜೀವನದಲ್ಲಿ ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾದ್ಯವಾಗುತ್ತದೆ ಎಂದರು.
ದಾವಣಗೆರೆ ವಿವಿಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಎಂ.ಕೆ.ದಾನಪ್ಪ ಮಾತನಾಡಿ ವಿದ್ಯಾರ್ಥಿಗಳು ಕ್ರಿಡೆಯಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ತೋರಿಸಬೇಕು ಎಂದು ಹೇಳಿದರು.
ವಿಶ್ವವಿದ್ಯಾನಿಲಯದ ದೈ.ಶಿಕ್ಷಣ ವಿಭಾಗದ ನಿರ್ದೇಶಕರಾದ ಎಂ.ಎಸ್.ರಾಜಕುಮಾರ್ ಮಾತನಾಡಿ ಕೇವಲ ಪಠ್ಯಪುಸ್ತಕಗಳನ್ನು ಓದುವುದು ಮಾತ್ರವಲ್ಲದೇ ಕ್ರೀಡೆಯು ಮಹತ್ವವಾಗಿದ್ದು ವಿವಿಧ ಕ್ರೀಡೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ತಿಳಿಸಿದರು.
2018-19ನೇ ಸಾಲಿನ ನೇಪಾಳನ ಕಟ್ಮಂಡುವಿನಲ್ಲಿ ನಡೆದ ಕಬ್ಬಡಿ ಪಂದ್ಯಾವಳಿಯಲ್ಲಿ ಹರಪನಹಳ್ಳಿಯ ಅನಿಲ್ ಮತ್ತು ಅಶೋಕ ಪಾಲ್ಗೊಂಡಿದ್ದಾರೆ.ಸಮಾರಂಭದ ಅಧ್ಯಕ್ಷತೆಯನು ಕಾಲೇಜು ಪ್ರಾಂಶುಪಾಲರಾದ ಎನ್.ಎಂ.ನಾಗರಾಜ ವಹಿಸಿದ್ದರು.
ಈ ಸಂದರ್ಭದಲ್ಲಿ ಜೆ.ರಾಮಲಿಂಗಪ್ಪ, ಎಂ.ವಿಜಯಕುಮಾರ್ ಹೇಮಪ್ಪ, ದೈಹಿಕ ಶಿಕ್ಷಕ ಗಿರೀಶ್,ಷಣ್ಮುಖಗೌಡ, ಪ್ರೋ.ಹುಚ್ಚುರಾಯಪ್ಪ ಸೇರಿದಂತೆ ಮತ್ತಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








