ಸ್ವಾತಂತ್ರ್ಯ ಹೋರಾಟದ ಕಿಡಿ ಹಚ್ಚಿದ ದಿಟ್ಟ ಮಹಿಳೆ ಚೆನ್ನಮ್ಮ : ನೆಹರೂ ಓಲೇಕಾರ

 ಹಾವೇರಿ:

      ಬ್ರಿಟಿಷರ್ ವಿರುದ್ಧ ಶೌರ್ಯ ಹಾಗೂ ದಿಟ್ಟತನದಿಂದ ಹೋರಾಡಿದ ಧೀರ ಮಹಿಳೆ ಕಿತ್ತೂರ ರಾಣಿ ಚೆನ್ನಮ್ಮ ಎಂದು ಶಾಸಕ ನೆಹರು ಓಲೇಕಾರ ಅವರು ಹೇಳಿದರು.

      ಮಂಗಳವಾರ ನಗರದ ಶಿವಬಸವ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವೀರಶೈವ ಪಂಚಮಸಾಲಿ ಸಮಾಜದ ಸಹಯೋಗದಲ್ಲಿ ಜರುಗಿದ ಕಿತ್ತೂರ ರಾಣಿ ಚೆನ್ನಮ್ಮ 240ನೇ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

      ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಚೆನ್ನಮ್ಮ ಉತ್ತಮ ಆಡಳಿತಗಾರ್ತಿ, ತುಂಬಾ ಧೈರ್ಯಶಾಲಿ ಹಾಗೂ ಚೆನ್ನಮ್ಮ ನಾಡಿನ ಬಗ್ಗೆ ಅಪಾರ ಕಾಳಜಿ, ಅಭಿಮಾನ ಹೊಂದಿದ್ದಳು. ಇತರರಿಗೂ ಸ್ವಾತಂತ್ರ್ಯ ಹೋರಾಟದ ಕಿಡಿ ಹಚ್ಚಿದ ದಿಟ್ಟ ಮಹಿಳೆ. ಚೆನ್ನಮ್ಮನ ಹೋರಾಟ ಇತಿಹಾಸವಾಗಿದೆ. ಇಂತಹ ಮಹಿಳೆ ಮತ್ತೆ ಹುಟ್ಟಿಬರಲು ಸಾಧ್ಯವಿಲ್ಲ. ಕಿತ್ತೂರ ರಾಣಿ ಚೆನ್ನಮ್ಮನನ್ನು ಮನೆ ದೇವರೆಂದು ಪೂಜಿಸಲಾಗುತ್ತಿದೆ. ಇಂದು ನಡೆದ ವಿವಿಧ ಕಲಾತಂಡಗಳ ಆಕರ್ಷಕ ಮೆರವಣಿಗೆ ಹಿಂದಿನಕಾಲದ ಗತವೈಭವವನ್ನು ನೆನಪಿಸಿತು ಎಂದು ಹೇಳಿದರು.

      ನಗರದಲ್ಲಿ ಚೆನ್ನಮ್ಮ ವೃತ್ತ ನಿರ್ಮಾಣಕ್ಕೆ ಈಗಾಗಲೇ ರೂ.25 ಲಕ್ಷ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಮಾಜದ ಬಾಂಧವರು ಆಯುರ್ವೇದಿಕ್ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮೊಟೇಬೆನ್ನೂರ ಬಳಿ 25 ಎಕರೆ ಜಾಗೆ ಕೇಳಿದ್ದು, ಹಾವನೂರ ಬಳಿ 400 ಎಕರೆ ಸರ್ಕಾರಿ ಜಾಗೆಯಿದ್ದು ಇದರಲ್ಲಿ 30 ಎಕರೆ ಜಾಗೆಯನ್ನು ಸಮಾಜದ ಬಾಂಧವರಿಗೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಸಮಾಜ ಬಾಂಧವರು ತಮ್ಮ ಸಮಸ್ಯೆಗಳನ್ನು ನೇರವಾಗಿ ನನಗೆ ತಿಳಿಸಿ, ನಿಮ್ಮ ಸಮಸ್ಯೆಗಳಿಗೆ ಸದಾ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

      ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಅವರು ಮಾತನಾಡಿ, ವೀರಶೈವ ಪಂಚಮಸಾಲಿ ಸಮಾಜ ಆರ್ಥಿಕವಾಗಿ ಹಿಂದುಳಿದ ಸಮಾಜವಾಗಿದೆ. ಈ ಸಮಾಜ ಆರ್ಥಿಕವಾಗಿ ಶೈಕ್ಷಣಿಕವಾಗಿ ಮುಂದೆಬರಬೇಕು. ಈ ಸಮಾಜದ ಏಳ್ಗೆಗೆ ಸದಾ ಶ್ರಮಿಸುವುದಾಗಿ ಹೇಳಿದರು.

      ಶ್ರೀ ಶಿವಲಿಂಗೇಶ್ವರ ಮಹಿಳಾ ವಿದ್ಯಾಲಯದ ಉಪನ್ಯಾಸಕಿ ಶ್ರೀಮತಿ ಪುಷ್ಪಾ ಶೆಲವಡಿಮಠ ಅವರು ಕಿತ್ತೂರ ರಾಣಿ ಚೆನ್ನಮ್ಮ ಕುರಿತು ಉಪನ್ಯಾಸ ನೀಡಿದರು.

      ರಾಜ್ಯ ವೀರಶೈವ ಪಂಚಮಸಾಲಿ ಸಮಾಜದ ನಿಕಟ ಪೂರ್ವಅಧ್ಯಕ್ಷ ಬಸವರಾಜ ದಂಡೂರ, ಪಿ.ಡಿ.ಶಿರೂರ ಮಾತನಾಡಿದರು.
ಸಾನಿಧ್ಯ ವಹಿಸಿದ್ದ ವೀರಶೈವ ಪಂಚಮಸಾಲಿ ಸಮಾಜದ ಹರಿಹರ ಪೀಠದ ವಚನಾನಂದ ಸ್ವಾಮಿಗಳು ಹಾಗೂ ಹುಕ್ಕೇರಿಮಠದ ಸದಾಶಿವ ಮಹಾಸ್ವಾಮಿಗಳು ಉದ್ಘಾಟನೆ ನೆರವೇರಿಸಿ, ಆಶೀರ್ವಚನ ನೀಡಿದರು.

      ಕಾರ್ಯಕ್ರಮದಲ್ಲಿ ಜಿ.ಪಂ.ಸದಸ್ಯ ಸಿದ್ಧರಾಜ ಕಲಕೋಟಿ, ಸಮಾಜದ ಸಮಾಜದ ಜಿಲ್ಲಾ ಹಾಗೂ ತಾಲೂಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸನ್ಮಾನ:

      ಇದೇ ಸಂದರ್ಭದಲ್ಲಿ 25ನೇ ವಯಸ್ಸಿನಲ್ಲಿ ನ್ಯಾಯಾಧೀಶರಾದ ಜ್ಯೋತಿ ಬೆಳಕೇರಿ, ನಗರಸಭೆ ಸದಸ್ಯರಾದ ಮಲ್ಲಿಕಾರ್ಜುನ ಸಾತೇನಹಳ್ಳಿ, ಸಮಾಜದ ಹಲವರು ಮುಖಂಡರು ಸೇರಿದಂತೆ ಇತರರನ್ನು ಸನ್ಮಾನಿಸಲಾಯಿತು.ಸಮಾಜದ ಜಿಲ್ಲಾ ಘಟಕ ಅಧ್ಯಕ್ಷ ವಿರೇಶ ಮತ್ತಿಹಳ್ಳಿ ಸ್ವಾಗತಿಸಿದರು. ಶಿಕ್ಷಕ ನಾಗರಾಜ ನಡುವಿನಮಠ ಕಾರ್ಯಕ್ರಮ ನಿರೂಪಿಸಿದರು.

ಅದ್ಧೂರಿ ಮೆರವಣಿಗೆ:

      ಕಾರ್ಯಕ್ರಮಕ್ಕೂ ಮೊದಲು ನಗರದ ಎ.ಪಿ.ಎಂ.ಸಿ. ಪ್ರಾಂಗಣದಿಂದ ಹೊರಟ ಕಿತ್ತೂರರಾಣಿ ಚೆನ್ನಮ್ಮ ಭಾವಚಿತ್ರದ ಅದ್ಧೂರಿ ಮೆರವಣಿಗೆ ಶಾಸಕ ನೆಹರು ಓಲೇಕಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಬಸವರಾಜ ಶಿವಣ್ಣನವರ, ಶಿವರಾಜ ಸಜ್ಜನರ, ಪಿ.ಡಿ.ಶಿರೂರ, ವಿರೇಶ ಮತ್ತಿಹಳ್ಳಿ ಇತರರು ಉಪಸ್ಥಿತರಿದ್ದರು.

      ನಂದಿಕೋಲು, ಗೊಂಬೆಕುಣಿತ, ಡೊಳ್ಳುಕುಣಿತ, ವೀರಗಾಸೆ, ಕಂಸಾಳೆ, ಪೂಜಾ ಕುಣಿತ ಹಾಗೂ ಝಾಂಜ್‍ಮೇಳ ತಂಡಗಳ ಆಕರ್ಷಕ ಮೆರವಣಿಗೆ ನಗರದ ಹಾನಗಲ್ ರಸ್ತೆ, ಹೊಸಮನಿ ಸಿದ್ದಪ್ಪ ವೃತ್ತ, ಗಾಂಧಿ ವೃತ್ತದ ಮೂಲಕ ಶಿವಬಸವ ಕಲ್ಯಾಣ ಮಂಟಪ ತಲುಪಿತು.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link