ಬೈಕ್ ಹಾಗೂ ಸಿಲಿಂಡರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ

ಬೆಂಗಳೂರು

       ಬೈಕ್ ಹಾಗೂ ಸಿಲಿಂಡರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಬಂಧಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡೂರು ಸಮೀಪದ ಕಟ್ಟುಗೊಲ್ಲಹಳ್ಳಿ ಬಳಿ ನಡೆದಿದೆ.

        ದೇವನಹಳ್ಳಿ ತಾಲೂಕಿನ ಭಟ್ಟರಮಾರೆನಹಳ್ಳಿಯ ಬಸವರಾಜ್(20) ಮೃತ ದುರ್ದೈವಿ. ಬೈಕ್ ಸವಾರ ಏರ್ ಪೋರ್ಟ್ ಮಾರ್ಗವಾಗಿ ಹೋಗುತ್ತಿದ್ದರು. ಈ ವೇಳೆ ಎದುರುಗಡೆಯಿಂದ ಗ್ಯಾಸ್ ಸಿಲಿಂಡರ್ ಲಾರಿ ಬಂದು ಬೈಕಿಗೆ ಡಿಕ್ಕಿ ಹೊಡೆದು ಸವಾರ ಬಸವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

        ಡಿಕ್ಕಿಯ ರಭಸಕ್ಕೆ ಬೈಕ್ ಹಾಗೂ ಸಿಲಿಂಡರ್ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಬಸವರಜ್ ಗುರುತು ಸಿಗದಂತೆ ಸುಟ್ಟು ಹೋಗಿದ್ದರು ಬೈಕ್ ಮತ್ತು ಲಾರಿ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಅಪಘಾತದಿಂದಾಗಿ ಬೂದಿಗೆರೆ ಮಾರ್ಗದ ವಿಮಾನ ನಿಲ್ದಾಣ ರಸ್ತೆಯು ಸಂಪೂರ್ಣ ಬಂದ್ ಆಗಿತ್ತು.ಅಪಘಾತ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವಲಹಳ್ಳಿ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.

        ಜಗಳದಿಂದ ಬೇಸತ್ತು ಪತಿ ನೇಣು: ಪತ್ನಿಯೊಂದಿಗಿನ ಜಗಳದಿಂದ ಬೇಸತ್ತು ಪತಿ ನೇಣಿಗೆ ಶರಣಾಗಿರುವ ದುರ್ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪಿಯ ಸರಸ್ವತಿ ನಗರದಲ್ಲಿ ನಡೆದಿದೆ.

       ಸರಸ್ವತಿ ನಗರದ ಮೊದಲ ಕ್ರಾಸ್‍ನ ಶಶಿಕುಮಾರ್ (20)ಎಂದು ಆತ್ಮಹತ್ಯೆ ಮಾಡಿಕೊಂಡವರನ್ನು ಗುರುತಿಸಲಾಗಿದೆ.ಗಾರೆ ಕೆಲಸ ಮಾಡಿಕೊಂಡಿದ್ದ ಶಶಿಕುಮಾರ್ ಕೆಲ ದಿನಗಳ ಹಿಂದೆ ವಿವಾಹವಾಗಿದ್ದರು. ವಿವಾಹದ ನಂತರ ಕೆಲದಿನಗಳ ಕಾಲ ಅನ್ಯೋನ್ಯವಾಗಿದ್ದ ದಂಪತಿಯ ನಡುವೆ ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆಯುತ್ತಿತ್ತು. ಜಗಳದಿಂದ ಬೇಸತ್ತ ಶಶಿಕುಮಾರ್ ಮಂಗಳವಾರ ರಾತ್ರಿ ಪತ್ನಿ ಹೊರಗೆ ಹೋಗಿದ್ದಾಗ ನೇಣಿಗೆ ಶರಣಾಗಿದ್ದಾರೆ.ಮಹದೇವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

 ಕಾರುಗಳಿಗೆ ಬೆಂಕಿ

        ಹೆಗ್ಗನಹಳ್ಳಿಯ ಶ್ರೀಗಂಧದ ಕಾವಲು ಬಳಿ ಮನೆ ಮುಂದೆ ನಿಲ್ಲಿಸಿದ್ದ ಇಂಡಿಕಾ, ಇಟಿಯೋಸ್ ಸೇರಿ, 3 ಕಾರುಗಳಿಗೆ ಮಂಗಳವಾರ ಮಧ್ಯರಾತ್ರಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಜಖಂಗೊಳಿಸಿ ಪರಾರಿಯಾಗಿದ್ದಾರೆ.

        ಈ ಸಂಬಂಧ ದೂರು ದಾಖಲಿಸಿರುವ ರಾಜಗೋಪಾಲನಗರ ಪೊಲೀಸರು ಪ್ರಕರಣ ದಾಖಲಿಸಿ ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link