ಕೊಟ್ಟೂರು
ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಅವರನ್ನು ಬೆಂಬಲಿsಸಬೇಕು. ಇದು ಪಕ್ಷದ ಸೂಚನೆ ಹಾಗೂ ಪಕ್ಷದ ಪ್ರಮುಖ ಕರ್ತವ್ಯ ಎಂದು ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಡಾ. ತಿಪ್ಪೇಸ್ವಾಮಿ ವೆಂಕಟೇಶ ಹೇಳಿದರು.
ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆದರೆ ನಮ್ಮ ಜೆಡಿಎಸ್ ಪಕ್ಷ ಜಿಲ್ಲಾಧ್ಯಕ್ಷರು, ಜಿಲ್ಲೆ ಮತ್ತು ತಾಲೂಕು ಪದಾಧಿಕಾರಿಗಳ ಸಭೆ ಕರೆದು ಕಾಂಗ್ರೇಸ್ ಅಭ್ಯರ್ಥಿ ಪರ ಪ್ರಚಾರ ಮಾಡುವ ನಿಟ್ಟಿನಲ್ಲಿ ಚರ್ಚೆ ಮಾಡಬೇಕಿತ್ತು. ಮಾಡಿಲ್ಲ ಎಂದರು.
ಈ ಸಂಗತಿ ಜೆಡಿಎಸ್ ಕಾರ್ಯಕರ್ತರಲ್ಲಿ ಮತ್ತು ಮುಖಂಡರಲ್ಲಿ ಗೊಂದಲ ಸೃಷ್ಟಿಸಿದೆ. ಇದು ನಿವಾರಣೆಯಾಗಬೇಕು ಎಂದರು.
ಇದು ಜೆಡಿಎಸ್ ಸಮಸ್ಯೆಯಾದರೆ, ಕಾಂಗ್ರೇಸ್ ಪಕ್ಷದವರು ಇಲ್ಲಿಯ ತನಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರನ್ನು ಮತ್ತು ಕಾರ್ಯಕರ್ತನ್ನು ವಿಶ್ವಾಸವಕ್ಕೆ ತೆಗೆದುಕೊಂಡಿಲ್ಲ ಮತ್ತು ಪ್ರಚಾರಕ್ಕೂ ಆಹ್ವಾನಿಸಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ಅದೇನೇ ಇದ್ದರೂ ನಾವೇಲ್ಲ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುತ್ತೇವೆ. ಉಗ್ರಪ್ಪ ಗೆಲ್ಲುತ್ತಾರೆ. ಇವರು ಉತ್ತಮ ಸಂಸದೀಯ ಪಟು ಇಂತಹವರು ಲೋಕಸಭೆಯಲ್ಲಿ ಇರಬೇಕು ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








