ರಾಜ್ಯೋತ್ಸವ ಪೂರ್ವಭಾವಿ ಸಭೆ

ಬ್ಯಾಡಗಿ:

       ತಾಲೂಕಾ ಕ್ರೀಡಾಂಗಣದಲ್ಲಿ 62ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲು ಗುರುವಾರ ತಹಶೀಲದಾರ ಕೆ ಗುರುಬಸವರಾಜ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

     ಸುಭಾಸ ವೃತದಿಂದ ನಾಡ ದೇವತೆ ಭುವನೇಶ್ವರಿಯ ಭಾವ ಚಿತ್ರದ ಮೆರವಣಿಗೆ ಹೊರಟು, ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ಕನ್ನಡ ವಿಷಯದ ಭಾಷಣದಲ್ಲಿ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿಗಳಿಂದ ಭಾಷಣ ಸ್ಪರ್ಧೆಯ ಜೊತೆಗೆ ಕ್ರೀಡಾಂಗಣ ಸೇರಿದಂತೆ ಎಲ್ಲೆಡೆಯೂ ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ಕ್ರಮ ಕೈಕೊಳ್ಳಲು ತಿಳಿಸಿದರು.

     ಪರಸಭಾ ಮುಖ್ಯಾಧಿಕಾರಿ ವಿ.ಎಂ.ಪೂಜಾರ ತಾಲೂಕಾ ಕ್ರೀಡಾಂಗಣದ ಸ್ವಚ್ಚತೆಯನ್ನು ಕಾಪಾಡುವುದಾಗಿ ಮತ್ತು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕುಡಿಯುವ ನೀರನ ಸೌಲಭ್ಯವನ್ನು ಒದಗಿಸುವುದಾಗಿ ತಿಳಿಸಿದರು.

       ಕನ್ನಡ ಪರ ಸಂಘಟನೆ ಧುರೀಣ ಚಂದ್ರು ಛತ್ರದ ಮಾತನಾಡಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಅತಿಥಿಗಳನ್ನು ಹೊರತು ಪಡಿಸಿ ಇನ್ನಾವುದೋ ವ್ಯಕ್ತಿಗಳು ವೇದಿಕೆಯಲ್ಲಿ ಬಾರದಂತೆ ಕ್ರಮ ಕೈಕೊಳ್ಳುವಂತೆ ತಹಶೀಲದಾರರಿಗೆ ಮನವಿ ಮಾಡಿದರು.

       ಸಭೆಯಲ್ಲಿ ಕನ್ನಡಪರ ಸಂಘಟನೆಯ ಬಸವರಾಜ ಹಾವನೂರ, ತಾಲೂಕಾ ಕಸಾಪ ಅಧ್ಯಕ್ಷ ಬಿ.ಎಂ.ಜಗಾಪುರ, ಸಮಾಜ ಕಲ್ಯಾಣಾಧಿಕಾರಿ ಹನುಮಂತಪ್ಪ ಲಮಾಣಿ, ತಾಲೂಕಾ ದೈಹಿಕ ಶಿಕ್ಷಣಾಧಿಕಾರಿ ಬಿ.ಎನ್.ರ್ಯಾವಳ, ಪಿ.ಎಂ.ಶೆಟ್ಟಿಕೇರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link