ಬೆಂಗಳೂರು:
ಬೆಂಗಳೂರು ನಗರ ಭಾರತದ ನವೋದ್ಯಮ ರಾಜಧಾನಿಯಾಗಿದ್ದು, ನವೋದ್ಯಮ ಕುರಿತ ಯೋಜನೆಗಳನ್ನು ರೂಪಿಸುವಾಗ ಪರಿಸರ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಬಲವಾಗಿ ಹೆಚ್ಚಿನ ಗಮನ ಹರಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ನಗರದಲ್ಲಿಂದು ನವೋದ್ಯಮ ಆರಂಭ ನೋಂದಣಿ ಕುರಿತು ಖಾಸಗಿ ಸಂಸ್ಥೆಯೊಂದಿಗಿನ ತ್ವರಿತ ಬ್ರಾಡ್ ಬ್ಯಾಂಡ್ ಸಂಪರ್ಕ ವ್ಯವಸ್ಥೆ ಒಡಂಬಡಿಕೆಗೆ ಸಹಿ ಹಾಕಿದ ಬಳಿಕ ಮಾತನಾಡಿದ ಅವರು, ತ್ವರಿತ ಗತಿಯ ಬ್ರಾಡ್ ಬ್ಯಾಂಡ್ ಸಂಪರ್ಕ ವ್ಯವಸ್ಥೆ ಹೆಚ್ಚಿನ ನವೋದ್ಯಮಗಳ ಅಭಿವೃದ್ದಿಗೆ ಉತ್ತಮ ದಾರಿಯನ್ನು ಹಾಕಿ ಕೊಡಲಿದೆ ಎಂದು ಹೇಳಿದರು.
ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಮಾತನಾಡಿ, ನವೋದ್ಯಮಗಳ ಸ್ಥಾನದಲ್ಲಿ ಬೆಂಗಳೂರು ಅಗ್ರಸ್ಥಾನ ಪಡೆದಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ