ಬೆಂಗಳೂರು:
ರಾಜ್ಯದಲ್ಲಿ ಕಳೆದ ಕಾಂಗ್ರೆಸ್ ಸರ್ಕಾರ ಜಾರಿ ತಂದಿದ್ದ ಜನಪರ ಯೋಜನೆಗಳನ್ನು ದೇಶದ ಯಾವ ರಾಜ್ಯ ಸರ್ಕಾರಗಳು ಜಾರಿ ತಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೈಂದೂರಿನಲ್ಲಿಂದು ಚುನಾವಣಾ ಪ್ರಚಾರ ಭಾಷಣ ಮಾಡಿದ ಅವರು, ಹಿಂದುತ್ವದ ಹೆಸರಿನಲ್ಲಿ ಬಿಜೆಪಿಯವರು ಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಕಳೆದ ಸರ್ಕಾರ ಸಾವಿರಾರು ಕೋಟಿ ರೂಪಾಯಿ ಹಣವನ್ನು ಅಭಿವೃದ್ದಿಗಾಗಿ ನೀಡಿದರೂ ಜನರು ತಮಗೆ ಬೆಂಬಲ ನೀಡಲಿಲ್ಲ, ಈ ಕುರಿತು ತಾವು ಪರಾಮರ್ಶೆ ನಡೆಸಿ ಉಪ ಚುನಾವಣೆಯಲ್ಲಿ ಪಕ್ಷವನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ