ಶ್ರೀನಗರ :
ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿರುವ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಈ ವೇಳೆ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.
ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ದೊರಕಿದ ಹಿನ್ನಲೆಯಲ್ಲಿ ಸೇನೆ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದು. ಈ ವೇಳೆ ಸೇನೆ ಕೂಡ ದಿಟ್ಟ ಪ್ರತ್ಯುತ್ತರ ನೀಡಿದ್ದು ಇಬ್ಬರು ಉಗ್ರರನ್ನು ಹತ್ಯೆಗೈದಿದೆ. ಇನ್ನು ಉಗ್ರರಿಗಾಗಿ ಸೇನಾ ಕಾರ್ಯಾಚರಣೆ ಮುಂದುವರಿದಿದೆ.
ಉಗ್ರರ ವಿರುದ್ದದ ಎನ್ಕೌಂಟರ್ನ ಆರಂಭಿಕ ಸುತ್ತಿನ ಫೈರಿಂಗ್ ನಲ್ಲಿ ಸೇನಾ ಮೇಜರ್ ಅವರಿಗೆ ಉಗ್ರರ ಗುಂಡು ತಗುಲಿ ಅವರು ತೀವ್ರವಾಗಿ ಗಾಯಗೊಂಡರು. ಬಳಿಕ ಅವರು ಕೊನೆಯುಸಿರೆಳೆದರು ಎಂದು ಸೇನಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದರು.
ಹತರಾಗಿರುವ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬುದನ್ನು ತಿಳಿಯುವ ಪ್ರಯತ್ನ ನಡೆದಿದೆ. ಗಾಯಾಳು ಮೇಜರ್ ಅವರನ್ನು ಒಡನೆಯೇ ಬಾದಾಮಿಬಾಗ್ನ 92ನೇ ನೆಲೆಯಲ್ಲಿರುವ ಸೇನಾ ಆಸ್ಪತ್ರೆಗೆ ಒಯ್ಯಲಾಯಿತಾದರೂ ಅವರ ಪ್ರಾಣವನ್ನು ಉಳಿಸಲಾಗಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ