ಹಿರಿಯ ಪತ್ರಕರ್ತ ವೈ.ಎನ್.ಜೋಶಿ ನಿಧನ

ಹುಬ್ಬಳ್ಳಿ: 

      ಹಿರಿಯ ಪತ್ರಕರ್ತ, ರಾಜ್ಯ ಪತ್ರಿಕಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ವೈ.ಎನ್. ಜೋಶಿ (86) ಅವರು ಇಂದು ನಿಧನರಾಗಿದ್ದಾರೆ.

      ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಅವರಿಗೆ ನಗರದ ವಿವೇಕಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಬೆಳಿಗ್ಗೆ 6.45 ಕ್ಕೆ ಕೊನೆಯುಸಿರೆಳೆದರು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ‌.

      ಹಲವು ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು ಸಂಯಕ್ತ ಕರ್ನಾಟಕ ದಿನಪತ್ರಿಕೆಯಲ್ಲಿನ ತಮ್ಮ ‘ಬೇವು ಬೆಲ್ಲ’ ಅಂಕಣದಿಂದಾಗಿ ಮನೆಮಾತಾಗಿದ್ದರು. ಕೃಷಿಗೆ ಸಂಬಂಧಿದಂತೆ ಹಲವಾರು ಲೇಖನಗಳನ್ನು ಬರೆದಿದ್ದ ಅವರು ಕರಾರುವಕ್ಕಾಗಿ ಚುನಾವಣೆ ಸಮೀಕ್ಷೆ ಬರೆಯುವುದರಲ್ಲಿ ನಿಸ್ಸೀಮರಾಗಿದ್ದರು.

      ಕರ್ನಾಟಕ ರಾಜ್ಯ ಪತ್ರಿಕಾ ಅಕಾಡೆಮಿ ಅವರ ಪತ್ರಿಕೋದ್ಯಮ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗುರುತಿಸಿತ್ತು. ಇತ್ತೀಚೆಗೆ ಅವರಿಗೆ ಹಿರಿಯ ಪತ್ರಕರ್ತರಿಗೆ ನೀಡುವ ಮಾಸಾಶನವನ್ನು ಕರ್ನಾಟಕ ಸರ್ಕಾರ ಮಂಜೂರು ಮಾಡಿತ್ತು. ಮೃತರು ಇಬ್ಬರು ಪುತ್ರರು, ಒಬ್ಬ ಪುತ್ರಿ ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರ ಬೆಳಿಗ್ಗೆ 11 ಗಂಟೆಗೆ ಕೇಶ್ವಾಪುರದ ಮುಕ್ತಿಧಾಮದಲ್ಲಿ ನೆರವೇರಲಿದೆ.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link