ತಿರುವನಂತಪುರದ ಆಶ್ರಮದ ಮೇಲೆ ದುಷ್ಕರ್ಮಿಗಳ ದಾಳಿ

ತಿರುವನಂತಪುರ: 
 
       ಕೆಲ ದಿನಗಳ ಹಿಂದೆ ಸುಪ್ರಿಂಕೋರ್ಟ್ ನೀಡಿದ್ದ ತೀರ್ಪನ್ನು ಸ್ವಾಗತಿಸಿದ ತಿರುವನಂತಪುರದ ಕುಂಡಮಕಡವುದಲ್ಲಿರುವ ಸ್ವಾಮಿ ಸಂದೀಪಾನಂದ ಗಿರಿಯವರ ಆಶ್ರಮದ ಮೇಲೆ ದುಷ್ಕರ್ಮಿಗಳ ತಂಡವೊಂದು ಶನಿವಾರ ದಾಳಿ ನಡೆಸಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ  . ಆಶ್ರಮದ ಮೇಲೆ ಇಂದು ಬೆಳಿಗ್ಗೆ ದಾಳಿ ನಡೆಸಿರುವ ದುಷ್ಕರ್ಮಿಗಳು ಆಶ್ರಮಕ್ಕೆ ಸೇರಿದ ಎರಡು ಕಾರು ಹಾಗೂ ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
 
    ಬೆಂಕಿ ಹಚ್ಚಿದ ಪರಿಣಾಮ ಆಶ್ರಮದಲ್ಲಿ ದಟ್ಟ ಹೊಗೆ ಆವರಿಸಿದ ಹಿನ್ನಲೆಯಲ್ಲಿ ಆಶ್ರಮದಲ್ಲಿದ್ದ ಸೇವಕರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಬೆಂಕಿ ನಂದಿಸಿದ್ದು, ವಾಹನಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link