ಬೆಂಗಳೂರು
ಪಕ್ಷದ ತತ್ವ ಮತ್ತು ಸಿದ್ಧಾಂತದ ಮೇಲೆ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದೆ ಎಂದು ಜಲಸಂಪನ್ಮೂಲ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಬಳ್ಳಾರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಯಿಂದ ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ.ಜನರು ವಲಸೆ ಹೋಗುವುದನ್ನು ತಡೆಗಟ್ಟಲು ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿ ಮಾಡಬೇಕಾಗಿದೆ ಎಂದರು.
ಜಿಎಸ್ಟಿ, ನೋಟ್ ರದ್ದತಿ ನಂತರ ಬಳ್ಳಾರಿ ಜಿಲ್ಲೆಯಲ್ಲಿ ಎಲ್ಲ ವ್ಯಾಪಾರ ವಹಿವಾಟು ಕುಸಿದಿದೆ. ಅಂಗಡಿಗಳನ್ನು ಮುಚ್ಚುವÀ ಪರಿಸ್ಥಿತಿ ಬಂದಿದೆ ಎಂದು ಡಿ. ಕೆ. ಶಿವಕುಮಾರ್ ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2018/10/DK-Shivkumar-1.gif)