ಬೆಂಗಳೂರು :
ನಮ್ಮ ಕುಟುಂಬ ಹಾಗೂ ಶ್ರೀರಾಮುಲು ಕುಟುಂಬದವರಿಗೆ ಸಿದ್ದರಾಮಯ್ಯ ಕೊಡಬಾರದ ಕಾಟ ಕೊಟ್ಟರು, ನನ್ನನ್ನು ನಾಲ್ಕು ವರ್ಷ ಜೈಲಿನಲ್ಲಿಟ್ಟು ನನ್ನ ಜೀವನ ಹಾಳು ಮಾಡಿದರು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಮಾಡಿರುವ ಆರೋಪಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಜನರ ದಿಕ್ಕು ತಪ್ಪಿಸಿದ ಸಿದ್ದು :ರೆಡ್ಡಿ ಆರೋಪ
ಜನಾರ್ಧನ ರೆಡ್ಡಿ ಹೇಳಿಕೆಗೆ ಟ್ವಿಟರ್ ಮೂಲಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಹಿಂದೆ ಸಂಸದ ಪ್ರತಾಪ್ ಸಿಂಹ ಬರೆದಿದ್ದ ಮೈನಿಂಗ್ ಮಾಫಿಯಾ, ಇವರ್ಯಾರು ಗೊತ್ತೇನು , ಇವರ ಕಥೆ ಹೇಳಲೇನು ಎಂಬ ಪುಸ್ತಕವನ್ನು ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯನವರು ಅನ್ಯಾಯವಾಗಿ ತನ್ನನ್ನು ನಾಲ್ಕು ವರ್ಷ ಜೈಲಿಗೆ ಹಾಕಿಸಿದ್ದರು ಎಂದು ಕಣ್ಣೀರು ಹಾಕುತ್ತಿರುವ ಜನಾರ್ಧನ ರೆಡ್ಡಿಯವರೇ, ದಯವಿಟ್ಟು ನಿಮ್ಮ ಪಕ್ಷದ ಸಂಸದರೇ ಬರೆದಿದ್ದ ಈ ಪುಸ್ತಕ ಓದಿ. ಜೈಲಿಗೆ ಹೋಗುವ ಪಾಪ ಏನು ಮಾಡಿದ್ದೀರಿ ಎಂದು ಗೊತ್ತಾಗುತ್ತೆ. pic.twitter.com/iTLNNTCb11
— Siddaramaiah (@siddaramaiah) October 29, 2018
ಸಿದ್ದರಾಮಯ್ಯನವರು ಅನ್ಯಾಯವಾಗಿ ತನ್ನನ್ನು ನಾಲ್ಕು ವರ್ಷ ಜೈಲಿಗೆ ಹಾಕಿಸಿದ್ದರು ಎಂದು ಕಣ್ಣೀರು ಹಾಕುತ್ತಿರುವ ಜನಾರ್ಧನರೆಡ್ಡಿಯವರೇ ದಯವಿಟ್ಟು ನಿಮ್ಮ ಪಕ್ಷದ ಸಂಸದರೇ ಬರೆದಿದ್ದ ಈ ಪುಸ್ತಕ ಓದಿ, ಜೈಲಿಗೆ ಹೋಗುವ ಪಾಪ ಏನು ಮಾಡಿದ್ದಿರಿ ಎಂದು ಗೊತ್ತಾಗುತ್ತೆ ಎಂದು ಟಾಂಗ್ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ