ಹಾಸನ:
ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿ ಕೆಲ ಕಾಲ ಜನರಲ್ಲಿ ಆತಂಕ ಸೃಷ್ಟಿಸಿತು. ಅರಸೀಕೆರೆ ತಾಲೂಕು ಜಾವಗಲ್ ಹೋಬಳಿಯ ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕೆಲವು ಮನೆಗಳಲ್ಲಿ ಪಾತ್ರೆಗಳು ನೆಲಕ್ಕೆ ಬಿದ್ದಿದ್ದು ಜನತೆ ಆತಂಕಗೊಂಡಿದ್ದರು, ಸುಮಾರು 10 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ.
ನಾಗೇನಹಳ್ಳಿ, ರಂಗಾಪುರ, ತಮ್ಲಾಪುರ, ಹಂದ್ರಾಳು, ಕರಗುಂಡ ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅರಸೀಕೆರೆ ತಹಸೀಲ್ದಾರ್‌ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಹಿಂದೆ ಆಗಸ್ಟ್ 21ರಂದು ಲಘು ಭೂಕಂಪವಾಗಿ ನೂರಕ್ಕೂ ಹೆಚ್ಚು ಮನೆಗಳು ಬಿರುಕುಬಿಟ್ಟಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ