ಬಳ್ಳಾರಿ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಅಪರ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ ಅವರು ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಡಿಸಿ ಸೋಮಶೇಖರ ಅವರು, ಉಕ್ಕಿನ ಮನುಷ್ಯರೆಂದೆ ಖ್ಯಾತರಾದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಆಧುನಿಕ ಭಾರತ ನಿರ್ಮಾಣದಲ್ಲಿ ಅಗ್ರಗಣ್ಯ ನಾಯಕರು. ಸ್ವಾತಂತ್ರೋತ್ತರ ಭಾರತದಲ್ಲಿ 560 ಸಂಸ್ಥಾನಗಳನ್ನು ಭಾರತದ ಅಡಿಗೆ ತಂದು ಭಾರತದ ಏಕತೆ,ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ ಎಂದರು.
ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಹೆಸರಿನಲ್ಲಿ ನಾವು ಆಚರಿಸುತ್ತಿರುವ ಮತ್ತು ಸ್ವೀಕರಿಸುತ್ತಿರುವ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆಯು ವಿವಿಧತೆಯಲ್ಲಿ ಏಕತೆಯುಳ್ಳ ಅಖಂಡ ಭಾರತದ ಪ್ರಜೆಗಳು ನಾವು ಎನ್ನುವ ಹೆಮ್ಮೆ ಮತ್ತು ಅಭಿಮಾನಗಳನ್ನು ನಮ್ಮಲ್ಲಿ ಜಾಗೃತಗೊಳಿಸಬೇಕು ಎಂದರು.
ಭಾರತವನ್ನು ಶಕ್ತಿಶಾಲಿ ರಾಷ್ಟ್ರನಿರ್ಮಾಣ ಮಾಡುವ ನಿಟ್ಟಿನಲ್ಲಿ ನಮ್ಮದೇ ಆದ ಸೇವೆ ಮತ್ತು ಕೊಡುಗೆ ಸಲ್ಲಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಿಬ್ಬಂದಿ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ