ಹುಬ್ಬಳ್ಳಿ:
ಹುಬ್ಬಳ್ಳಿ-ಧಾರವಾಡ ನಗರವನ್ನು ಮೂರು ತಿಂಗಳಲ್ಲಿ ಸ್ವಚ್ಛಗೊಳಿಸಿ ರಾಜ್ಯದ ಮಾದರಿ ನಗರವನ್ನಾಗಿ ಮಾಡಲಾಗುವುದು, ನಗರದ ಹಸರೀಕರಣಕ್ಕೂ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಹುಬ್ಬಳ್ಳಿಯ ಬಸ್ ನಿಲ್ದಾಣದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಏರ್ಪಡಾಗಿದ್ದ ವಿಶೇಷ ಸ್ವಚ್ಛತ ಅಭಿಯಾನಕ್ಕೆ ಇಂದು ಚಾಲನೆ ನೀಡಿ ಮಾತನಾಡಿ, ನಗರದಲ್ಲಿ ಧೂಳಿನ ಸಮಸ್ಯೆ ನಿವಾರಣೆಗೆ ಪರಿಹಾರ ಕಂಡುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ನಗರದಲ್ಲಿ ಖಾಲಿ ಸ್ಥಳಗಳಲ್ಲಿ ಗಿಡ ಮರಗಳನ್ನು ನೆಡುವ ಕೆಲಸವಾಗಬೇಕು. ರಾತ್ರಿಯ ವೇಳೆ ನಗರದ ರಸ್ತೆಗಳನ್ನು ಸ್ವಚ್ಛಗೊಳಿಸುವ ಕಾರ್ಯವಾಗಬೇಕು ಎಂದು ಶೆಟ್ಟರ್ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








