ಹಾವೇರಿ
ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪುಣ್ಯಕೋಟಿ ಕುಟೀರಕ್ಕೆ ಭೇಟಿ ನೀಡಿ, ಅಲ್ಲಿನ ಚಟುವಟಿಕೆ ಹಾಗೂ ದಾಸ್ತಾನುಗಳನ್ನು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಪರಿಶೀಲನೆ ನಡೆಸಿದರು.
ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಬೇಡದ ಹಳೆಯ ವಸ್ತುಗಳ ಸ್ವೀಕಾರ ಹಾಗೂ ಅಗತ್ಯವಿದ್ದವರು ಈ ವಸ್ತುಗಳನ್ನು ಪಡೆದುಕೊಳ್ಳಲು ಅನುಕೂಲವಾಗುವಂತೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಆರಂಭಿಸಿರುವ ಪುಣ್ಯಕೋಟಿ ಕುಟೀರಕ್ಕೆ ಶನಿವಾರ ಬೆಳಿಗ್ಗೆ ಭೇಟಿ ನೀಡಿದರು.
ಈ ಕೇಂದ್ರದ ಚಟುವಟಿಕೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಮತ್ತಷ್ಟು ಪ್ರಚಾರ ಕೈಗೊಂಡು ಹೆಚ್ಚು ಹೆಚ್ಚು ವಸ್ತುಗಳ ಸ್ವೀಕಾರ ಹಾಗೂ ಬೇಕಾದವರಿಗೆ ವಿತರಣೆ ಮಾಡುವ ಚಟುವಟಿಕೆಗಳನ್ನು ತೀವ್ರಗೊಳಿಸುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ನಾಗರಾಜ ನಾಯಕ ಅವರಿಗೆ ಸಲಹೆ ನೀಡಿದರು.ಈ ಸಂಧರ್ಭದಲ್ಲಿ ಕುಟೀರದ ಮೇಲುಸ್ತುವಾರಿ ಸಿಬ್ಬಂದಿಗಳು ಹಾಗೂ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ