ಐಸಿಯುವಿನಲ್ಲೇ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ

ಉತ್ತರಪ್ರದೇಶ: 

   ಹಾವು ಕಚ್ಚಿಸಿಕೊಂಡು ಐದು ದಿನಗಳ ಹಿಂದೆ ಖಾಸಗಿ ಆಸ್ಪತ್ರೆ ಸೇರಿದ್ದ ಯುವತಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಆಕೆ ಒಬ್ಬಳೇ ಇರುವುದನ್ನು ಕಂಡ ಆಸ್ಪತ್ರೆ ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

   ಈ ಘಟನೆ ಕುರಿತು ಮಾಹಿತಿ ನೀಡಿರುವ ಹಿರಿಯ ಪೊಲೀಸ್​ ಅಧಿಕಾರಿ ಎ ಸಿಂಗ್​, “ಯುವತಿಯನ್ನು ಜೆನೆರಲ್​ ವಾರ್ಡ್​ಗೆ ಸ್ಥಳಾಂತರಿಸಿದ ನಂತರ ಅತ್ಯಾಚಾರದ ಕುರಿತು ಹೇಳಿಕೊಂಡಿದ್ದಾಳೆ. ಆಕೆಯ ಹೇಳಿಕೆ ಪಡೆದು ದೂರು ದಾಖಲಿಸಿಕೊಂಡಿದ್ದು, ತನಿಖೆಯನ್ನೂ ಆರಂಭಿಸಿದ್ದೇವೆ. ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು  ವಶಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ” ಎಂದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಆಸ್ಪತ್ರೆ ಸಿಬ್ಬಂದಿಯನ್ನು ಬಂಧಿಸಿದ್ದು, ಪರಾರಿಯಾಗಿರುವ ಇನ್ನೂ ನಾಲ್ವರಿಗಾಗಿ ಹುಡುಕಾಟ ನಡೆಸಿದ್ದಾರೆ.

  ರಾತ್ರಿ ಒಬ್ಬಳೇ ಇದ್ದಾಗ ಸಮವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬ ನಾಲ್ವರ ಜತೆಗೂಡಿ ಬಂದು ನನಗೆ ಬಲವಂತವಾಗಿ ಇಂಜೆಕ್ಷನ್​ ಕೊಟ್ಟರು. ಇದಾದ ನಂತರ ನನ್ನ ಕೈಗಳನ್ನು ಕಟ್ಟಿ ಅತ್ಯಾಚಾರ ಎಸಗಿದರು ಎಂದು ಯುವತಿ ತನ್ನ ಅಜ್ಜಿಯ ಬಳಿ ಹೇಳಿಕೊಂಡಿದ್ದಾಳೆ. ಈ ವಿಷಯವನ್ನು ಆಸ್ಪತ್ರೆಯ ಆಡಳಿತ ಮಂಡಳಿಯವರಿಗೆ ತಿಳಿಸಿದಾಗ ಅವರೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link