ಬೆಂಗಳೂರು
ಸಾಲಮನ್ನಾ ಯೋಜನೆ ಜಾರಿಗೆ ತರಲು ಸರ್ಕಾರ ಸಂಕಲ್ಪ ಮಾಡಿದ್ದು, ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ರೈತರ ವಿರುದ್ದ ಬಂಧನದ ವಾರೆಂಟ್ ಜಾರಿ ಮಾಡಿರುವ ಸಂಬಂಧ ಪ್ರಕ್ರಿಯೆ ನೀಡಿದ ಅವರು, ರೈತರ ಹಿತ ಕಾಯುವಂತೆ ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಸೂಚನೆ ನೀಡಿದ್ದಾರೆ.
ಇಂದು ಈ ಸಂಬಂಧ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಜೊತೆ ದೂರವಾಣಿಯಲ್ಲಿ ಮಾತನಾಡಿ ರೈತರ ಹಿತ ಕಾಪಾಡಿ ಈ ಪ್ರಕರಣ ಕುರಿತು ಸಂಪೂರ್ಣ ವರದಿ ಸಲ್ಲಿಸುವಂತೆಯೂ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.