ಚಿತ್ರದುರ್ಗ :
ನಗರದ ಶ್ರೀಮುರುಘಾಮಠಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರು ಡಾ. ಶಿವಮೂರ್ತಿ ಮುರುಘಾ ಶರಣರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ, ಕಾರ್ಯನಿರ್ವಹಣಾ ನಿರ್ದೇಶಕರಾದ ಡಾ. ಈ. ಚಿತ್ರಶೇಖರ್, ಡಾ. ಜಿ.ಎನ್. ಮಲ್ಲಿಕಾರ್ಜುನಪ್ಪ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ. ದೊರೆಸ್ವಾಮಿ, ಡಿ.ಎಸ್. ಮಲ್ಲಿಕಾರ್ಜುನ್, ಫಾತ್ಯರಾಜನ್, ಶಾಸಕ ರಘುಮೂರ್ತಿ, ಮುಂತಾದವರಿದ್ದರು.
ಕಾಂಗ್ರೆಸ್ ಮುಖಂಡರ ದಂಡು
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮುರುಘಾಮಠಕ್ಕೆ ಬೇಟಿ ನೀಡಿದ ಹಿನ್ನಲೆಯಲ್ಲಿ ಜಿಲ್ಲಾ ಕಾಂಗ್ರೆಸ್‍ನ ಹಲವು ಮುಖಂಡರು ಪರಮೇಶ್ವರ್ ಅವರನ್ನು ಬರ ಮಾಡಿಕೊಂಡರು
ಶಾಸಕ ರಘುಮೂರ್ತಿ, ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ, ಮುಖಂಡರಾದ ಎಂ.ಎ.ಸೇತುರಾಮ್, ಆರ್.ಕೆ.ಸರ್ದಾರ್, ಹನುಮಲಿ ಷನ್ಮುಖಪ್ಪ, ಅಜ್ಜಪ್ಪ, ಡಾ.ತಿಪ್ಪೇಸ್ವಾಮಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.