ಬೆಂಗಳೂರು
ಬೆಳಗಾವಿ ಜಿಲ್ಲೆಯ ರೈತರ ವಿರುದ್ಧ ಆಕ್ಸಿಸ್ ಬ್ಯಾಂಕ್ ಕೋಲ್ಕೊತ್ತಾದ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದು, ನ್ಯಾಯಾಲಯ ರೈತರ ವಿರುದ್ಧ ಬಂಧನ ವಾರಂಟ್ ಹೊರಡಿಸಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಸಮಸ್ಯೆ ಬಗೆಹರಿಸುವಂತೆ ಇಂದೂ ಸಹ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಸೂಚಿಸಿದ್ದಾರೆ.
ಮುಖ್ಯಮಂತ್ರಿಗಳು ರೈತರು ಹಾಗೂ ಆಕ್ಸಿಸ್ ಬ್ಯಾಂಕಿನ ಅಧಿಕಾರಿಗಳೊಂದಿಗೆ ಸಂಧಾನ ಸಭೆ ನಡೆಸುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಅದರಂತೆ ಜಿಲ್ಲಾಧಿಕಾರಿಗಳು ನವೆಂಬರ್ 7 ರಂದು ಬ್ಯಾಂಕ್ ಅಧಿಕಾರಿಗಳು, ರೈತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ರೈತರ ಸಮಸ್ಯೆಗಳಿಗೆ ಬ್ಯಾಂಕಿನ ಅಧಿಕಾರಿಗಳೊಂದಿಗೆ ಚರ್ಚಿಸಿ ಸೌಹಾರ್ದಯುತವಾಗಿ ರೈತರಿಗೆ ತೊಂದರೆಯಾಗದಂತೆ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
