ಗ್ರಾಪಂ ಸಿಬ್ಬಂದಿಗಳು ಕಂದಾಯ ವಸೂಲಿ ಮಾಡಬೇಕು

ಎಂ ಎನ್ ಕೋಟೆ

         ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಕಡ್ಡಾಯವಾಗಿ ಬಿಲ್ ಕಲೆಕ್ಟರ್ ಜೊತೆ ಸೇರಿ ಹಳ್ಳಿ ಹಳ್ಳಿಗಳಿಗೆ ಹೋಗಿ ಕಂದಾಯ ವಸೂಲಾತಿಯನ್ನು ಮಾಡಬೇಕು ಎಂದು ತಾಲ್ಲೂಕ್ ಕಾರ್ಯನಿರ್ವಾಹಕ ಅಧಿಕಾರಿ ನರಸಿಂಹಯ್ಯ ತಿಳಿಸಿದರು.

         ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಕಂದಾಯ ವಸೂಲಾತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ಹಳ್ಳಿಹಳ್ಳಿಗಳಿಗೆ ಹೋಗಿ ಕಂದಾಯವನ್ನು ವಸೂಲಾತಿಯನ್ನು ಮಾಡಬೇಕು. ನಮ್ಮ ತಾಲ್ಲೂಕಿನಲ್ಲಿ ಸಾಕಷ್ಟು ಕಂದಾಯ ಬಾಕಿ ಇರುವುದರಿಂದ ಎಲ್ಲ ಸಿಬ್ಬಂದಿಗಳು ಸೇರಿ ವಸೂಲಾತಿಯನ್ನು ಮಾಡಬೇಕು. ಕುಡಿಯುವ ನೀರಿನ ಬಗ್ಗೆ ಯಾವುದೇ ಹಳ್ಳಿಗಳಲ್ಲಿ ಸಮಸ್ಯೆ ಇದ್ದರೆ ತಕ್ಷಣ ಗ್ರಾಮ ಪಂಚಾಯಿತಿಗೆ ತಿಳಿಸಬೇಕು. ಜೊತೆಗೆ ಕಡ್ಡಾಯವಾಗಿ ಕುಡಿಯುವ ನೀರಿನ ಬಗ್ಗೆ ತುರ್ತಾಗಿ ಕೆಲಸಗಳನ್ನು ಮಾಡಬೇಕು ಎಂದು ಪಿಡಿಓಗಳಿಗೆ ತಿಳಿಸಿದರು.

         ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಕುಡಿಯುವ ನೀರಿನ ಟ್ಯಾಂಕರ್‍ಗಳನ್ನು ಸ್ವಚ್ಛಗೊಳಿಸಬೇಕು. ಮೋಟಾರ್‍ಗಳು, ಸಾರ್ವಜನಿಕರ ನಲ್ಲಿಗಳನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ಗ್ರಾಮಗಳಲ್ಲಿ ಬೀದಿ ದೀಪಗಳನ್ನು ಯಾವಾಗಲೂ ಉರಿಯುತ್ತಿರುವುದನ್ನು ಸ್ಥಗಿತಗೊಳಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕೆಲಸ ಮಾಡುವ ಕೂಲಿಗಾರರನ್ನು ಗ್ರಾಮ ಪಂಚಾಯಿತಿಯಿಂದ ಕೆಲಸ ಕೊಡುವ ವ್ಯವಸ್ಥೆಯನ್ನು ನಾವು ಮಾಡುತ್ತಿದ್ದೇವೆ ಎಂದು ತಿಳಿಸಿದರು.

          ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಜಯ್ ದೇವ್ ಪಿಡಿಓಗಳಾದ ತಿಪ್ಪೇಸ್ವಾಮಿ, ಮಂಜುನಾಥ್ ಹಾಗೂ ಸಿಬ್ಬಂದಿಗಳು ಇದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link