ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ: ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

ಹಾವೇರಿ

         ತಾಲೂಕು ಶಿಶು ಅಭಿವೃದ್ಧಿ ಯೋನನಾಧಿಕಾರಿಗಳ ಕಚೇರಿ ವತಿಯಿಂದ ಆಯೋಜಿಸಲಾದ ‘ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ’(ಬೇಟಿ ಬಚಾವೋ ಬೇಟಿ ಪಡಾವೋ) ಕಾರ್ಯಕ್ರಮದ ಗೋಡೆ ಬರಹ ಕಾರ್ಯಕ್ರಮಕ್ಕೆ ಸೋಮವಾರ ಸಿಡಿಪಿಓ ಕಚೇರಿ ಆವರಣದಲ್ಲಿ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ವರ ಎನ್.ಹುಬ್ಬಳ್ಳಿ ಅವರು ಚಾಲನೆ ನೀಡಿದರು.

         ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ಉಮಾ ಕೆ.ಎಸ್., ಮಹಿಳಾ ಮೇಲ್ವಿಚಾರಕರು ಇತರರು ಉಪಸ್ಥಿತರಿದ್ದರು. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಲ್ಷ ಎಂ.ಜಿ.ಹಿರೇಮಠ ಹಾಗೂ ಸಂಗಡಿಗರು ಗೋಡೆ ಬರಹ ಮತ್ತು ಬಿತ್ತಿ ಚಿತ್ರಗಳನ್ನು ಬಿಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link