ಬೆಂಗಳೂರು
ವಿರೋಧ ಪಕ್ಷ ಬಿಜೆಪಿ ಸೇರಿ ಹಿಂದೂ ಸಂಘಟನೆಗಳ ಪ್ರಭಲ ವಿರೋಧದ ನಡುವೆಯೂ ರಾಜ್ಯಸರ್ಕಾರ ಶನಿವಾರ ಬೆಂಗಳೂರು ಸೇರಿ ಜಿಲ್ಲಾ ಕೇಂದ್ರಗಳಲ್ಲಿ ಆಚರಿಸಲಿರುವ ಜಯಂತಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರದಿಂದ ಕೆಲವೆಡೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಅಭೂತಪೂರ್ವ ಪೊಲೀಸ್ ಬಂದೋಬಸ್ಥ್ ವ್ಯವಸ್ಥೆ ಕೈಗೊಳ್ಳಲಾಗಿದೆ.
ಟಿಪ್ಪು ಜಯಂತಿ ಆಚರಣೆಗೆ ಮೊದಲಿನಿಂದಲೂ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಕೋಮು ಸೂಕ್ಷ್ಮ ಪ್ರದೇಶಗಳಾದ ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಹುಬ್ಬಳ್ಳಿ-ಧಾರವಾಡ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಎರಡು ದಿನಗಳ ನಿಷೇದಾಜ್ಞೆ ಜಾರಿಗೊಳಿಸಿ ಮೆರವಣಿಗೆ ಪ್ರತಿಭಟನೆ ಅಲ್ಲದೇ ಜನ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಕೊಡಗು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರು ನಿಷೇಧಾಜ್ಞೆಯನ್ನು ಜಾರಿಗೊಳಿಸಿದರೆ ಚಿತ್ರದುರ್ಗ, ಮಂಡ್ಯ, ಹುಬ್ಬಳ್ಳಿ-ಧಾರವಾಡ ಮುಂತಾದ ಕಡೆ ನಿಷೇಧಾಜ್ಞೆಯನ್ನು ಜಿಲ್ಲಾಡಳಿತಗಳು ಜಾರಿಗೊಳಿಸಿವೆ ಭದ್ರತೆಗಾಗಿ ರಾಜ್ಯ ಮೀಸಲು ಪಡೆಯ ತುಕಡಿಗಳು,ಜಿಲ್ಲಾ ಸಶಸ್ತ್ರದಳ ಸೇರಿ ಹೆಚ್ಚಿನ ಪೊಲೀಸ್ ಪಡೆಗಳನ್ನು ನಿಯೋಜಿಸಿ ಅಗತ್ಯವಿರುವ ಎಲ್ಲಾ ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕಮಲ್‍ಪಂತ್ ತಿಳಿಸಿದ್ದಾರೆ.
ಈ ನಡುವೆ ಬಿಜೆಪಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಟಿಪ್ಪು ಜಯಂತಿ ವಿರೋಧಿಸಿ ಶುಕ್ರವಾರ ನಡೆಸಿದ ಪ್ರತಿಭಟನೆಗಳಿಗೂ ಬಿಗಿ ಪೆÇಲೀಸ್ ಬಂದೋಬಸ್ತ್ ಮಾಡಲಾಗಿತ್ತುಟಿಪ್ಪು ಜಯಂತಿಯ ಪ್ರಧಾನ ಕಾರ್ಯಕ್ರಮವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು 2 ಸಾವಿರ ಮಂದಿಗೆ ಮಾತ್ರ ಅವಕಾಶ ಕಲ್ಪಿಸಿ ಭದ್ರತೆಯನ್ನು ಹೆಚ್ಚಿಸಲಾಗಿದೆ
ಪೊಲೀಸ್ ಪಥ ಸಂಚಲನ
ಟಿಪ್ಪು ಜಯಂತಿ ಆಚರಣೆ ವೇಳೆ ಸೂಕ್ಷ್ಮ ಪ್ರದೇಶಗಳಾದ ಚಿತ್ರದುರ್ಗ,ಕೂಡಗು,ಮಂಡ್ಯ ಇನ್ನಿತರ ಜಿಲ್ಲೆಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪೊಲೀಸ್ ಹಾಗೂ ಅರೆ ಸೇನಾಪಡೆಗಳಿಂದ ಪಥಸಂಚಲನ ನಡೆಸಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದು, 2015ರಲ್ಲಿ ನಡೆದಂತಹ ಪ್ರತಿಭಟನೆ ಹಾಗೂ ಹಿಂಸಾಚಾರ ಮರುಕಳಿಸದಂತೆ ನಿಗಾ ವಹಿಸಿದ್ದಾರೆ. 2015ರಲ್ಲಿ ನಡೆದ ಹಿಂಸಾಚಾರ ಸಂದರ್ಭದಲ್ಲಿ ವಿಹೆಚ್‍ಪಿ ಮುಖಂಡ ಕುಟ್ಟಪ್ಪ ಎಂಬುವರು ಮೃತಪಟ್ಟಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ