ನವದೆಹಲಿ:
ದೇಶದಲ್ಲಿ ನಡೆಯುತ್ತಿರುವ ಪಂಚರಾಜ್ಯಗಳ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಕಾರಣ ಕೇಂದ್ರ ಚುನಾವಣಾ ಆಯೋಗ ನವೆಂಬರ್ 12ರಿಂದ ಡಿಸೆಂಬರ್ 7ವರೆಗೂ ಯಾವುದೇ ರೀತಿಯ ಮತದಾನೋತ್ತರ ಸಮೀಕ್ಷೆ ನಡೆಸದಂತೆ ನಿಷೇಧಾಜ್ಞೆ ಜಾರಿ ಮಾಡಿದೆ .
ಚುನಾವಣೆ ಘೋಷಣೆಯಾಗಿರುವ 5 ರಾಜ್ಯಗಳಾದ ಛತ್ತೀಸ್ ಘಡ, ಮಧ್ಯ ಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಈ ಮಹತ್ವದ ನಿರ್ಧಾರ ಕೈಗೊಂಡಿದ್ದು. ಮತದಾನೋತ್ತರ ಸಮೀಕ್ಷೆಗಳ ಪ್ರಸಾರ ಹಾಗು ಸಾಮಾಜಿಕ ಪ್ರಸರಣಕ್ಕೆ ಆಯೋಗ ಸುಮಾರು ಒಂದು ತಿಂಗಳ ನಿಷೇಧ ಹೇರಿದೆ, ಚುನಾವಣಾ ಪರಿವೀಕ್ಷಣಾ ಸಮಿತಿ ನೀಡಿದ ವರದಿ ಆಧಾರದ ಮೇಲೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಯೋಗದ ಮೂಲಗಳು ತಿಳಿಸಿದೆ.