ಬೆಂಗಳೂರು
ಒಂಟಿ ಮಹಿಳೆ ಮನೆಗೆ ನುಗ್ಗಿದ ಕಾಮುಕನೊಬ್ಬ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಹೀನ ಕೃತ್ಯ ಬಸವೇಶ್ವರನಗರದಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಬಸವೇಶ್ವರನಗರಕ್ಕೆ ರಾತ್ರಿ ಬಂದಿರುವ ಕಾಮುಕ ಮಹಿಳೆಯು ಒಂಟಿಯಾಗಿ ಹೋಗುತ್ತಿರುವುದನ್ನು ಗಮನಿಸಿ ಆಕೆಯನ್ನು ಹಿಂಬಾಲಿಸಿ ಮನೆಯೊಳಗೆ ಮಹಿಳೆಯು ಹೋಗಿ ಬಾಗಿಲು ಹಾಕಿಕೊಂಡ ಕೂಡಲೇ ಮನೆಯ ಬೆಲ್ ಮಾಡಿದ್ದಾನೆ.
ಮಹಿಳೆಯು ಬಾಗಿಲು ತೆಗೆದ ತಕ್ಷಣ ಆಕೆಯ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿ ಮನೆಯೊಳಗೆ ನುಗ್ಗಿ ಬಾಗಿಲು ಮುಚ್ಚಿದ್ದಾನೆ. ಕೂಗಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಮಹಿಳೆ ಜತೆಗೆ ಬಳಿಕ ಮಹಿಳೆ ಜತೆ ಲೈಂಗಿಕ ಕ್ರಿಯೆಗೆ ಮುಂದಾಗಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಎಸಗಿದ್ದಾನೆ.
ಅತ್ಯಾಚಾರ ಮಾಡಿ ಮನೆಯಲ್ಲೇ ಕೆಲ ಕಾಲ ಇದ್ದ ದುಷ್ಕರ್ಮಿಯು ಮೇಲಿಂದ ಮೇಲೆ ಮಹಿಳೆ ಮೇಲೆ ಅತ್ಯಾಚಾರ ಎಸಗಿ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದಾನೆ. ಈ ಕುರಿತು ಸಂತ್ರಸ್ತೆಯಿಂದ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಸುಮಾರು 2 ಕಿ ಮೀ ವ್ಯಾಪ್ತಿಯ ಸಿಸಿ ಕ್ಯಾಮರಾ ದೃಶ್ಯಾವಳಿಗಳ ಪರಿಶೀಲನೆ ನಡೆಸಲಾಗಿದೆ. ಆರೋಪಿ ಮನೆಯಿಂದ ಪರಾರಿಯಾಗಿರುವ ದೃಶ್ಯಗಳು ಹತ್ತಿರದ ಸಿಸಿ ಕ್ಯಾಮಾರದಲ್ಲಿ ಪತ್ತೆಯಾಗಿದೆ. ಆರೋಪಿಯ ಸುಳಿವು ಪಡೆದಿರುವ ಬಸವೇಶ್ವರ ನಗರ ಪೊಲೀಸರು, ಕಾಮುಕನ ಪತ್ತೆಗಾಗಿ ವಿಶೇಷ ತಂಡ ರಚಿಸಿ ತೀವ್ರ ಶೋಧ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ