ದಾವಣಗೆರೆ:
ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ದಾವಣಗರೆ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಜಿಲ್ಲಾ ಪಟ್ಟಣ ಸಹಕಾರ ಬ್ಯಾಂಕುಗಳ ಒಕ್ಕೂಟ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ, ಶಿವಮೊಗ್ಗ, ದಾವಣಗರೆ, ಚಿತ್ರದುರ್ಗ ಸಹಕಾರಿ ಹಾಲು ಒಕ್ಕೂಟ, ಇಫ್ಕೋ ಸಂಸ್ಥೆ ಹಾಗೂ ಕ್ರಿಭ್ಕೋ ಲಿಮಿಟೆಡ್ ಇವುಗಳ ಸಂಯುಕ್ತಾಶ್ರಯದಲ್ಲಿ ನ.14ರಿಂದ 20ರ ವರೆಗೆ 65ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಸಹಕಾರ ಯೂನಿಯನ್ನ ಉಪಾಧ್ಯಕ್ಷ ಎಸ್.ಬಿ.ಶಿವಕುಮಾರ್, ನ.14ರಂದು ಮಧ್ಯಾಹ್ನ 12.30ಕ್ಕೆ ನಗರದ ಸದಸ್ಯೋಜಾತ ಹಿರೇಮಠದಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಸಪ್ತಾಹವನ್ನು ಉದ್ಘಾಟಿಸಲಿದ್ದಾರೆ. ಯೂನಿಯನ್ ಅಧ್ಯಕ್ಷ ಯು.ಜಿ.ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಎಸ್.ಎ.ರವೀಂದ್ರನಾಥ್, ರೈತರ ಫಸಲುಗಳ ಮತ್ತು ವ್ಯಾಪಾರೋದ್ಯಮ ಸಹಕಾರ ಸಂಘದ ಅಧ್ಯಕ್ಷ ಶಾಮನೂರು ಕಲ್ಲೇಶಪ್ಪ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ವಿ.ಚಂದ್ರಶೇಖರ್, ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಜೆ.ಆರ್.ಷಣ್ಮುಖಪ್ಪ, ಕನ್ನಿಕಾಪರಮೇಶ್ವರಿ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಆರ್.ಜಿ.ಶ್ರೀನಿವಾಸ್ಮೂರ್ತಿ, ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಬಿ.ಸಿ.ಉಮಾಪತಿ, ಶಿವ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಸಂಗಮೇಶ್ವರಗೌಡ, ಮಿಲ್ಲತ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೈಯದ್ ಸೈಫುಲ್ಲಾ, ದಾವಣಗೆರೆ-ಹರಿಹರ ಅರ್ಬನ್ ಸಹಕಾರ ಬ್ಯಾಂಕ್ ನಿಯಮಿತ ಎನ್.ಎ.ಮುರುಗೇಶ್, ಸಿಟಿ ಕೋ-ಆಪ್ ಬ್ಯಾಂಕ್ ಅಧ್ಯಕ್ಷ ಎನ್.ಜೆ.ಗುರುಸಿದ್ದಯ್ಯ, ಕನಕ ಅರ್ಬನ್ ಕೋ-ಆಪ್ ಬ್ಯಾಂಕ್ ಅಧ್ಯಕ್ಷ ಹೆಚ್.ಜಿ.ಸಂಗಪ್ಪ, ಮುರುಘರಾಜೇಂದ್ರ ಕೋ-ಆಪ್ ಬ್ಯಾಂಕ್ ಅಧ್ಯಕ್ಷ ಎಂ.ಜಯಕುಮಾರ್, ಅಂಬಾಭವಾನಿ ಬ್ಯಾಂಕ್ ಅಧ್ಯಕ್ಷ ತಿಪ್ಪೇಸ್ವಾಮಿ ಏಕಬೋಟೆ ಮತ್ತಿತರರು ಆಗಮಿಸಲಿದ್ದಾರೆಂದು ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ಗೆ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಬಿ.ವಿ.ಚಂದ್ರಶೇಖರ್, ಜೆ.ಆರ್.ಷಣ್ಮುಖಪ್ಪ, ಜಗದೀಶಪ್ಪ ಬಣಕಾರ್, ಕೆ.ಹೆಚ್.ಷಣ್ಮುಖಪ್ಪ, ಬಿ.ಕೆ.ಪ್ರಕಾಶ್, ಆರ್.ಜಿ.ಶ್ರೀನಿವಾಸಮೂರ್ತಿ, ಬಿ.ಶೇಖರಪ್ಪ, ಡಿ.ಹಾಲೇಶಪ್ಪ, ಜಿ.ಎನ್.ಸ್ವಾಮಿ ಅವರುಗಳಿಗೆ ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ನ.15ರಂದು ಜಗಳೂರು ತಾಲೂಕಿನ ಹನುಮಂತಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಸಾವಯವ ಕೃಷಿ ಮತ್ತು ಶೂನ್ಯ ಬಂಡವಾಳದ ಕೃಷಿಯಲ್ಲಿ ಸಹಕಾರ ಸಂಸ್ಥೆಗಳ ಪ್ರಮುಖ ಪಾತ್ರ ಕುರಿತು, ನ.16ರಂದು ಹರಪನಹಳ್ಳಿಯ ಶ್ರೀರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಮೌಲ್ಯವರ್ಧನೆ ಮತ್ತು ಬ್ರಾಂಡ್ ನಿರ್ಮಾಣ ಕುರಿತು,
ನ.17ರಂದು ಹೊನ್ನಾಳ್ಳಿಯ ಟಿಎಪಿಸಿಎಂಎಸ್ ಲಿ. ಸಂಘದ ಸಭಾಂಗಣದಲ್ಲಿ ಸಾರ್ವಜನಿಕ, ಖಾಸಗಿ ಸಹಕಾರಿ ಸಹಭಾಗಿತ್ವ ನಿರ್ಮಾಣ ಕುರಿತು, ನ.18ರಂದು ಚನ್ನಗಿರಿ ತಾಲೂಕಿನ ವಡ್ಡನಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಸರ್ಕಾರಿ ಯೋಜನೆಗಳು ಮತ್ತು ಆದಾಯೋತ್ಪನ್ನ ಕುರಿತು, ನ.19ರಂದು ಹರಿಹರ ತಾಲೂಕಿನ ಹೊಳೆಸಿರಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಯುವಜನ, ಮಹಿಳಾ ಮತ್ತು ಅಬಲ ವರ್ಗಕ್ಕಾಗಿ ಸಹಕಾರ ಸಂಸ್ಥೆಗಳು ಕುರಿತು ಹಾಗೂ ನ.20ರಂದು ದಾವಣಗೆರೆ ತಾಲೂಕಿನ ಗುಡಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಕೌಶಲ್ಯ, ತಾಂತ್ರಿಕತೆ ವೃದ್ಧಿ ಪಡಿಸುವ ಕುರಿತು ಉಪನ್ಯಾಸ ಹಾಗೂ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.ಸುದ್ದಿಗೋಷ್ಠಿಯಲ್ಲಿ ಯೂನಿಯನ್ ನಿರ್ದೇಶಕ ಜಿ.ಎಸ್.ಪರಮೇಶ್ವರಗೌಡ, ಸಿಇಒ ಸಂತೋಷಕುಮಾರ್, ವ್ಯವಸ್ಥಾಪಕ ಜಗದೀಶ್ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
