
ಶ್ವಾಸಕೋಶದ ಕ್ಯಾನ್ಸರ್ ಎಂಬ ಮಹಾಮಾರಿಗೆ ತುತ್ತಾಗಿ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತ್ ಕುಮಾರ್ ಅವರ ಅಂತ್ಯ ಸಂಸ್ಕಾರ ಇಂದು ಚಾಮರಾಜಪೇಟೆಯ ಚಿತಾಗಾರದಲ್ಲಿ ನಡೆಯಲಿದೆ.
ಕೇಂದ್ರ ಸಚಿವರಾದ ಹರ್ಷವರ್ಧನ್, ಧರ್ಮೇಂದ್ರ ಪ್ರಧಾನ್, ಪೀಯುಷ್ ಗೋಯೆಲ್, ರಾಮದಾಸ್ ಅಠಾವಳೆ, ವಿಧಾನ ಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ರಾಜ್ಯ ಸಚಿವ ಸಾ.ರಾ.ಮಹೇಶ್, ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಗಂಗಾಂಬಿಕೆ, ರಾಜ್ಯ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅಂತಿಮ ನಮನ ಸಲ್ಲಿಸಿದರು. ಮೂರು ಸೇನೆಗಳ ಪ್ರಮುಖರು ಸರ್ಕಾರಿ ಗೌರವ ಸಲ್ಲಿಸಿದರು.
ಅನಂತ್ ರ ಗುರು ಎಂದೇ ಬಿಂಬಿತರಾಗಿರುವ ಬಿಜೆಪಿ ಮುಖಂಡರಾದ ಎಲ್.ಕೆ. ಅಡ್ವಾಣಿ ಸಹಾ ಶಿಷ್ಯನ ಅಂತಿಮ ದರ್ಶನ ಪಡೆದು ಅನಂತ್ ಪತ್ನಿ ತೇಜಸ್ವಿನಿಯವರಿಗೆ ಸಾಂತ್ವನ ಹೇಳಿದರು.
ಅನಂತಕುಮಾರ್ ಅವರ ಮೃತದೇಹಕ್ಕೆ ಹೊದೆಸಿದ್ದ ರಾಷ್ಟ್ರಧ್ವಜವನ್ನು ತೆಗೆದು ಕುಟುಂಬ ವರ್ಗಕ್ಕೆ ಹಸ್ತಾಂತರಿಸಲಾಯಿತು. ಕೆಲವೇ ಕ್ಷಣಗಳಲ್ಲಿ ಅಗ್ನಿಸ್ಪರ್ಶವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








