ಬೆಂಗಳೂರು
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ಗಜ ಚಂಡಮಾರುತದಿಂದ ಗುರುವಾರರಿಂದ ಎರಡು ದಿನಗಳ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮಳೆಯಾಗಲಿದೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ. ಭಾರೀ ಪ್ರಮಾಣದಲ್ಲಿ ಮಳೆಯಾಗುವುದಿಲ್ಲ. ಚಂಡಮಾರುತ ಯಾವ ಪ್ರದೇಶದ ಕಡೆ ಹೋಗುತ್ತದೆ ಎನ್ನುವ ಆಧಾರದ ಮೇಲೆ ಈ ಪ್ರದೇಶಗಳಲ್ಲಿ ಮಳೆಯಾಗಲಿದ್ದು ಎಚ್ಚರಿಕೆ ವಹಿಸುವಂತೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ನವೆಂಬರ್ 15, 16 ರಂದು ಎರಡು ದಿನಗಳ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








