
ಖ್ಯಾತ ನಿರ್ಮಾಣ ಸಂಸ್ಥೆ, ಚನ್ನಾಂಬಿಕ ಫಿಲಂಸ್ ಲಾಂಛನದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಅರ್ಪಿಸುವ, ಶ್ರೀಮತಿ ಅನಿತಾಕುಮಾರಸ್ವಾಮಿ ಅವರು ನಿರ್ಮಿಸುತ್ತಿರುವ ಹಾಗೂ ನಿಖಿಲ್ ಕುಮಾರ್ ಅವರು ನಾಯಕರಾಗಿ ನಟಿಸಿರುವ `ಸೀತಾರಾಮ ಕಲ್ಯಾಣ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಬೆಂಗಳೂರು, ಮೈಸೂರು, ಊಟಿ, ಬಳ್ಳಾರಿ ಮುಂತಾದ ಕಡೆ ಚಿತ್ರಕ್ಕೆ 130 ದಿನಗಳ ಕಾಲ ಚಿತ್ರೀಕರಣ ನಡೆದಿದೆ..
ಎ.ಹರ್ಷ ನಿರ್ದೇಶನದ ‘ಸೀತಾರಾಮ ಕಲ್ಯಾಣ’ ಚಿತ್ರಕ್ಕೆ ಸುನೀಲ್ ಗೌಡ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಅನೂಪ್ ರುಬೆನ್ಸ್ ಅವರು ಸಂಗೀತ ನೀಡಿದ್ದಾರೆ. ಸ್ವಾಮಿ ಛಾಯಾಗ್ರಹಣ, ಗಣೇಶ್ ಮಲ್ಲಯ್ಯ ಸಂಕಲನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ರಘು ನಿಡುವಳ್ಳಿ ಹಾಗೂ ಪ್ರಶಾಂತ್ ರಾಜಪ್ಪ ಸಂಭಾಷಣೆ ಬರೆದಿದ್ದಾರೆ.

ಯುವರಾಜ ನಿಖಿಲ್ ಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ರಚಿತಾರಾಮ್. ಶರತ್ ಕುಮಾರ್, ರವಿಶಂಕರ್, ಮಧುಬಾಲ, ಗಿರಿಜಾ ಲೋಕೇಶ್, ಚಿಕ್ಕಣ್ಣ, ಆದಿತ್ಯ ಮೆನನ್, ಜ್ಯೋತಿ ರೈ, ನಯನ, ಶಿವರಾಜ್ ಕೆ.ಆರ್ ಪೇಟೆ, ಜೀವನ್, ವೀಣಾ ಪೊನ್ನಪ್ಪ, ರವಿ ಭಟ್, ಸವಿತಾ, ಗಿರೀಶ್ ಜತ್ತಿ, ಹರೀಶ್, ಸಂಜು ಬಸ್ಯ ಮುಂತಾದ ಕಲಾವಿದರು ‘ಸೀತಾರಾಮ ಕಲ್ಯಾಣ’ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








